ಅಯೋಧ್ಯ: ಜನವರಿ 20ರಂದು ಅಯೋಧ್ಯ ರಾಮಮಂದಿರ ಉದ್ಘಾಟನೆ ಗೊಂಡಿತ್ತು. ಇಂದಿಗೆ ಸುಮಾರು 6 ತಿಂಗಳು ಕಳೆದಿವೆ. ಪ್ರತಿದಿನ ರಾಮನ ದರ್ಶನ ಪಡೆಯಲು ಲಕ್ಷಾಂತರ ಭಕ್ತರು ಬರುತ್ತಾರೆ.ಈಗ ರಾಮಮಂದಿರ ಟ್ರಸ್ಟ್ ರಾಮನ ಗರ್ಭಗುಡಿಯಲ್ಲಿ ಹೊಸ ವ್ಯವಸ್ಥೆಯನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಇನ್ನು ರಾಮಮಂದಿರದಲ್ಲಿ ವಸ್ತ್ರ ಸಂಹಿತೆ ಜಾರಿಯಾಗಲಿದೆ.
ಈ ಡ್ರೆಸ್ ಕೋಡ್ ಅರ್ಚಕರಿಗೆ ಅನ್ವಯವಾಗಲಿದೆ, ದೇವಸ್ಥಾನದ ಅರ್ಚಕರು ಇನ್ನುಮುಂದೆ ಒಂದೇ ಬಗೆಯ ಉಡುಪಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಅರ್ಚಕರು ಚೌಬಂದಿ ಪೇಟ ಹಾಗೂ ಹಳದಿ ಬಣ್ಣದ ಧೋತಿ, ಕುರ್ತಾವನ್ನು ಧರಿಸಲಿದ್ದಾರೆ. ಇನ್ನು ರಾಮಮಂದಿರದ ಆವರಣದಲ್ಲಿ ಮೊಬೈಲ್ ಬಳೆಕೆಯನ್ನು ನಿಷೇಧಿಸಲಾಗಿದೆ.

