ನವದೆಹಲಿ: ಮುಂದಿನ 6 ತಿಂಗಳಲ್ಲಿ ಹೊಸ ಆದಾಯ ತೆರಿಗೆ ಕಾಯಿದೆ ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. 1961ರ ಆದಾಯ ತೆರಿಗೆ ಕಾಯಿದೆ ತೆರೆಮರೆಗೆ ಸರಿಯಲಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತೆರಿಗೆ ವ್ಯವಸ್ಥೆಯನ್ನು ಸರಳೀಕರಣ ಮಾಡಲು ಹೊಸ ಕಾಯಿದೆ ಜಾರಿಗೆ ತರಲಾಗುತ್ತಿದೆ. ಹೊಸ ಕಾಯ್ದೆಯಲ್ಲಿ ಸ್ಪಷ್ಟ ಸರಳ ಭಾಷೆಯಲ್ಲಿ ರಚನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ತೆರಿಗೆ ಪಾವತಿದಾರರಲ್ಲಿ ಭಯ ಮತ್ತು ಆತಂಕ ಹೋಗಲಾಡಿಸುವ ನಿಟ್ಟಿನಲ್ಲಿ ಸರಳ ಭಾಷೆಯಲ್ಲಿ ವ್ಯವಹರಿಸುವಂತೆ ಆದಾಯ ತೆರಿಗೆ ಇಲಾಖೆಗೆ ನಿರ್ಮಲಾ ಸೀತಾರಾಮನ್ ಸೂಚಿಸಿದ್ದಾರೆ. ತೆರಿಗೆ ಪಾವತಿದಾರರಿಗೂ ಯಾವುದೇ ರೀತಿಯಲ್ಲಿ ಕಿರುಕುಳ ಆಗದಂತೆ ವರ್ತಿಸಿ ಎಂದು ಸಲಹೆ ನೀಡಿದ್ದಾರೆ.

ಈ ವೇಳೆ ಸಿಬಿಡಿಟಿ ಅಧ್ಯಕ್ಷ ರವಿ ಅಗರವಾಲ್ ಮಾತನಾಡಿ, ವಿವಾದಗಳನ್ನು ತಗ್ಗಿಸಿ, ತೆರಿಗೆ ಪಾವತಿಯಲ್ಲಿ ಖಚಿತತೆ ನೀಡಲು ಹೊಸ ಕಾಯಿದೆ ಜಾರಿಗೆ ತರಲಾಗಿದ್ದು. ಇದು ಸುಲಭವಾಗಿ ಓದಲು ಅರ್ಥ ಮಾಡಿಕೊಳ್ಳಲು ಅನುಕೂಲವಾಗುದೇ ಬದಲಾವಣೆ ಹಿಂದಿರುವ ಮೂಲ ಉದ್ದೇಶ ಎಂದು ಹೇಳಿದ್ದಾರೆ.