Ad

ಉದ್ಘಾಟನೆಗೂ ಮೊದಲೇ ಕುಸಿದ ಸೇತುವೆ; ಕೋಟ್ಯಂತರ ಹಣ ನೀರಿನಲ್ಲಿ ಹೋಮ

Bihar Bridge Collapse

ಬಿಹಾರ: ಕೋಟ್ಯಂತರ ರೂಪಾಯಿ ವೆಚ್ಚದಲ್ಲಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆಯೊಂದು ಉದ್ಘಾಟನೆಗೂ ಮೊದಲೇ ಕುಸಿದು ಬಿದ್ದ ಘಟನೆ ಬಿಹಾರದಲ್ಲಿ ನಡೆದಿದೆ. ಅಂದಹಾಗೆ ಸರ್ಕಾರದ ದುಡ್ಡನ್ನು ತಿಂದು ತೇಗಿ ಕಳಪೆ ಮಟ್ಟದ ಕಾಮಗಾರಿ ನಡೆಸಿದ ಪ್ರಕರಣಗಳಲ್ಲಿ ಇದು ಕೂಡಾ ಒಂದಾಗಿದೆ.

Ad
300x250 2

ಈ ಘಟನೆ ಬಿಹಾರದ ಅರಾರಿಯಾ ಜಿಲ್ಲೆಯ ಪರಾರಿಯಾ ಗ್ರಾಮದಲ್ಲಿ ನಡೆದಿದ್ದು, ಬಕ್ರಾ ನದಿಗೆ ಅಡ್ಡಲಾಗಿ ಹೊಸದಾಗಿ ನಿರ್ಮಿಸಲಾಗಿದ್ದ ಸೇತುವೆಯ ಒಂದು ಭಾಗ ಮಂಗಳವಾರ (ಜೂನ್ 18) ಬೆಳಗ್ಗೆ ಕುಸಿದು ಬಿದ್ದಿದೆ. ಈ ಸೇತುವೆಯನ್ನು 12 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದ್ದು, ಇನ್ನೂ ಉದ್ಘಾಟನೆಗೊಂಡಿರಲಿಲ್ಲ ಎಂದು ತಿಳಿದು ಬಂದಿದೆ.

ಬಿಹಾರದ ಅರಾರಿಯಾ ಜಿಲ್ಲೆಯ ಬಕ್ರಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆಯು ಕುರ್ಸಾ ಕಾಂತಾ ಮತ್ತು ಸಿಕ್ತಿ ಪ್ರದೇಶಗಳನ್ನು ಸಂಪರ್ಕಿಸುತ್ತದೆ. ಇದನ್ನು ಇತ್ತೀಚೆಗೆ ಸಿಎಂ ನಿತೀಶ್ ಕುಮಾರ್ ನೇತೃತ್ವದ ಬಿಹಾರ ರಾಜ್ಯ ಸರ್ಕಾರ ನಿರ್ಮಿಸಿತ್ತು. ಆದರೆ, ಸೇತುವೆಗೆ ತೆರಳಲು ರಸ್ತೆ ನಿರ್ಮಾಣವಾಗದ ಕಾರಣ ಇನ್ನೂ ಉದ್ಘಾಟನೆಗೊಂಡಿರಲಿಲ್ಲ. ಹಾಗಾಗಿ ಜನರು ಆ ಸೇತುವೆಯಲ್ಲಿ ಹೋಗುತ್ತಿರಲಿಲ್ಲ. ಸಿಕ್ತಿ ಬ್ಲಾಕ್‌ನಲ್ಲಿರುವ ಬಕ್ರಾ ನದಿಯ ಪದರಿಯಾ ಘಾಟ್‌ನಲ್ಲಿ 12 ಕೋಟಿ ರೂಪಾಯಿ ವೆಚ್ಚದಲ್ಲಿ ಈ ಸೇತುವೆಯನ್ನು ನಿರ್ಮಿಸಲಾಗಿದೆ ಎಂದು ಹೇಳಲಾಗುತ್ತಿದೆ.

ಇನ್ನು ಬಿಹಾರದ ಅರಾರಿಯಾ ಜಿಲ್ಲೆಯ ಬಕ್ರಾ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆ ಕುಸಿತ ಪ್ರಕರಣದ ಬಗ್ಗೆ ಇದೀಗ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಸ್ಪಷ್ಟನೆ ನೀಡಿದ್ದಾರೆ. ಬಿಹಾರದ ಅರಾರಿಯಾದಲ್ಲಿ ಕುಸಿದ ಸೇತುವೆಯನ್ನು ಕೇಂದ್ರ ರಸ್ತೆ ಸಾರಿಗೆ ಸಚಿವಾಲಯದ ಅಡಿಯಲ್ಲಿ ನಿರ್ಮಿಸಲಾಗಿಲ್ಲ, ಬಿಹಾರ ರಾಜ್ಯ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಡಿಯಲ್ಲಿ ಇದರ ಕೆಲಸ ನಡೆಯುತ್ತಿತ್ತು ಎಂದು ಹೇಳುವ ಮೂಲಕ ಕೇಂದ್ರ ಸರ್ಕಾರಕ್ಕೂ ಇದಕ್ಕೂ ಸಂಬಂಧವಿಲ್ಲ ಎಂದು ಕೈತೊಳೆದುಕೊಂಡಿದ್ದಾರೆ.

Ad
Ad
Nk Channel Final 21 09 2023
Ad