Bengaluru 21°C
Ad

ಕಾಂಗ್ರೆಸ್ ಆಡಳಿತ ಮಾಡಿದ ಯಾವ ರಾಜ್ಯವೂ ಅಭಿವೃದ್ಧಿಯಾಗಿಲ್ಲ: ಮೋದಿ

ಸೋನಿಪತ್‌ನಲ್ಲಿ ನಡೆದ ಪ್ರಚಾರದಲ್ಲಿ ಮುಡಾ ವಿಚಾರವನ್ನು ಪ್ರಸ್ತಾಪಿಸಿದ ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತನಿಖೆಗೆ ಆದೇಶಿಸಿದೆ, ಅವರ ವಿರುದ್ಧ ತನಿಖೆಯಾಗಲೇಬೇಕು ಎಂದು ಒತ್ತಾಯಿಸಿದ್ದಾರೆ.

ಸೋನಿಪತ್: ಸೋನಿಪತ್‌ನಲ್ಲಿ ನಡೆದ ಪ್ರಚಾರದಲ್ಲಿ ಮುಡಾ ವಿಚಾರವನ್ನು ಪ್ರಸ್ತಾಪಿಸಿದ ಪ್ರಧಾನಿ ನರೇಂದ್ರ ಮೋದಿ, ಸಿಎಂ ಸಿದ್ದರಾಮಯ್ಯ ವಿರುದ್ಧ ಹೈಕೋರ್ಟ್ ತನಿಖೆಗೆ ಆದೇಶಿಸಿದೆ, ಅವರ ವಿರುದ್ಧ ತನಿಖೆಯಾಗಲೇಬೇಕು ಎಂದು ಒತ್ತಾಯಿಸಿದ್ದಾರೆ.

ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಹೈಕಮಾಂಡ್‌ ಭ್ರಷ್ಟವಾದಾಗ ಕೆಳಗೆ ಇರುವವರಿಗೆ ಲೂಟಿ ಹೊಡೆಯಲು ಪರವಾನಿಗೆ ನೀಡಿದಂತಾಗಲಿದೆ. ಕಾಂಗ್ರೆಸ್ ಆಡಳಿತ ಮಾಡಿದ ಯಾವ ರಾಜ್ಯವೂ ಅಭಿವೃದ್ಧಿಯಾಗಿಲ್ಲ ಎಂದರು.

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷ ಆಗಿದೆ. ಅಲ್ಲಿ ಯಾವ ಪರಿಸ್ಥಿತಿ ನಿರ್ಮಾಣವಾಗಿದೆ. ಖುದ್ದು ಅಲ್ಲಿಯ ಮುಖ್ಯಮಂತ್ರಿ ವಿರುದ್ಧ ಭೂ ಹಗರಣದ ಆರೋಪ ಕೇಳಿ ಬಂದಿದೆ, ಹೈಕೋರ್ಟ್ ಚಾಟೀ ಬೀಸಿ ತನಿಖೆಗೆ ಆದೇಶಿಸಿದೆ. ಹೀಗೆ ಭ್ರಷ್ಟಾಚಾರ ಮಾಡಿದವರಿಗೆ ಹರಿಯಾಣದಲ್ಲಿ ಅವಕಾಶ ಕೊಡ್ತಿರಾ? ಎಂದು ಮೋದಿ ಪ್ರಶ್ನಿಸಿದ್ದಾರೆ.

Ad
Ad
Nk Channel Final 21 09 2023