Bengaluru 22°C
Ad

ಒಡಿಶಾದಲ್ಲಿ ಮೊದಲ ಬಿಜೆಪಿ ಸರ್ಕಾರದ ಪ್ರಮಾಣವಚನ ಸ್ವೀಕಾರ ಜೂ.12ಕ್ಕೆ ಮುಂದೂಡಿಕೆ

ಒಡಿಶಾದಲ್ಲಿ ಈ ಬಾರಿ ಮೊದಲ ಬಾರಿಗೆ ಬಿಜೆಪಿ ಸರ್ಕಾರ ರಚನೆಯಾಗಲಿದೆ. ಮೊದಲ ಬಿಜೆಪಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಜೂನ್ 10ರಿಂದ ಜೂನ್ 12 ಕ್ಕೆ ಮುಂದೂಡಲಾಗಿದೆ ಎಂದು ಬಿಜೆಪಿ ನಾಯಕರಾದ ಜತಿನ್ ಮೊಹಂತಿ ಮತ್ತು ವಿಜಯಪಾಲ್ ಸಿಂಗ್ ತೋಮರ್ ಹೇಳಿದ್ದಾರೆ.

ನವದೆಹಲಿ: ಒಡಿಶಾದಲ್ಲಿ ಈ ಬಾರಿ ಮೊದಲ ಬಾರಿಗೆ ಬಿಜೆಪಿ ಸರ್ಕಾರ ರಚನೆಯಾಗಲಿದೆ. ಮೊದಲ ಬಿಜೆಪಿ ಸರ್ಕಾರದ ಪ್ರಮಾಣ ವಚನ ಸ್ವೀಕಾರ ಸಮಾರಂಭವನ್ನು ಜೂನ್ 10ರಿಂದ ಜೂನ್ 12 ಕ್ಕೆ ಮುಂದೂಡಲಾಗಿದೆ ಎಂದು ಬಿಜೆಪಿ ನಾಯಕರಾದ ಜತಿನ್ ಮೊಹಂತಿ ಮತ್ತು ವಿಜಯಪಾಲ್ ಸಿಂಗ್ ತೋಮರ್ ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯಕ್ರಮಗಳು ಈಗಾಗಲೇ ಫಿಕ್ಸ್ ಆಗಿರುವುದರಿಂದಾಗಿ ಒಡಿಶಾದ ಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮ ಮುಂದೂಡಿಕೆಯಾಗಿದೆ ಎಂದು ಮೊಹಾಂತಿ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಇಂದು ತಮ್ಮದೇ ಪ್ರಮಾಣವಚನ ಸಮಾರಂಭದಲ್ಲಿ ನಿರತರಾಗಿರುತ್ತಾರೆ. ನಾಳೆ  ಬಿಜೆಪಿಯ ಸಂಸದರನ್ನು ಭೇಟಿಯಾಗಲಿದ್ದಾರೆ. ಹೊಸದಾಗಿ ಆಯ್ಕೆಯಾದ ಸದಸ್ಯರ ಮೊದಲ ಶಾಸಕಾಂಗ ಪಕ್ಷದ ಸಭೆಯನ್ನು ಜೂನ್ 11ಕ್ಕೆ ಮರು ನಿಗದಿಪಡಿಸಲಾಗಿದೆ.

ಚುನಾವಣಾ ಪ್ರಚಾರದ ಸಂದರ್ಭದಲ್ಲಿ, ಜೂನ್ 10ರಂದು ಒಡಿಶಾದ ಮೊದಲ ಬಿಜೆಪಿ ಸರ್ಕಾರ ಪ್ರಮಾಣವಚನ ಸ್ವೀಕರಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ್ದರು. ಆದರೆ, ಬಿಜೆಪಿ ರಾಜ್ಯಾಧ್ಯಕ್ಷ ಮನಮೋಹನ್ ಸಮಾಲ್ ಈ ಸಮಾರಂಭ ಮುಂದೂಡಿಕೆಯಾಗುವುದರ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

 

 

 

Ad
Ad
Nk Channel Final 21 09 2023
Ad