ನವದೆಹಲಿ: ಹುತಾತ್ಮ ಯೋಧ ಅಂಶುಮನ್ ಸಿಂಗ್ ಪತ್ನಿ ಸ್ಮೃತಿ ಸಿಂಗ್ ಬಗ್ಗೆ ಅಶ್ಲೀಲ ಕಮೆಂಟ್ ಮಾಡಿದ್ದ ವ್ಯಕ್ತಿಯ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ರಾಷ್ಟ್ರೀಯ ಮಹಿಳಾ ಆಯೋಗ ನೀಡಿದ ದೂರಿನ ಅನ್ವಯ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದು, ಕಮೆಂಟ್ ಮಾಡಿದ ವ್ಯಕ್ತಿಯ ಹುಡುಕಾಟದಲ್ಲಿದ್ದಾರೆ.
ಭಾರತೀಯ ನ್ಯಾಯ ಸಂಹಿತೆ ಮತ್ತು ಮಾಹಿತಿ ತಂತ್ರಜ್ಞಾನ (IT) ಕಾಯ್ದೆಯಡಿಯಲ್ಲಿ ದೆಹಲಿ ಪೊಲೀಸ್‌ನ ಐಎಫ್‌ಎಸ್ಒ ಘಟಕ ಪ್ರಕರಣ ದಾಖಲಿಸಿಕೊಂಡಿದೆ. ಕಮೆಂಟ್ ಮಾಡಿರುವ ಸೋಶಿಯಲ್ ಮೀಡಿಯಾ ಯೂಸರ್ ದೆಹಲಿ ನಿವಾಸಿ ಎಂದು ತಿಳಿದು ಬಂದಿದೆ. ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 79 (ಪದ, ಚಿಹ್ನೆ ಅಥವಾ ಕಾರ್ಯದಿಂದ ಮಹಿಳೆಯ ಘನತೆಗೆ ಚ್ಯುತಿ ತರುವುದು) ಮತ್ತು ಐಟಿ ಕಾಯ್ದೆಯ ಸೆಕ್ಷನ್ 67 (ಎಲೆಕ್ಟ್ರಾನಿಕ್ ರೂಪದಲ್ಲಿ ಅಶ್ಲೀಲ ವಸ್ತುಗಳನ್ನು ಪ್ರಕಟಿಸುವುದು ಅಥವಾ ರವಾನಿಸುವುದು) ಅಡಿ ಕೇಸ್ ದಾಖಲಾಗಿದೆ.

