ಒಡಿಶಾ : ಒಡಿಶಾ ಸರ್ಕಾರ ಮಹತ್ವದ ನಿರ್ಣಯ ಕೈಗೊಂಡಿದ್ದು, ಇಡೀ ರಾಜ್ಯದಲ್ಲಿ ತಂಬಾಕು ಉತ್ಪನ್ನಗಳಿಗೆ ನಿಷೇಧ ಹೇರಲಾಗಿದೆ.
ತಂಬಾಕು ಬಳಕೆಯಿಂದ ಉಂಟಾಗುತ್ತಿರುವ ಗಂಭೀರ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟುವ ಉದ್ದೇಶದಿಂದ ಕಠಿಣ ನಿರ್ಧಾರ ಕೈಗೊಂಡಿದ್ದು, ತಂಬಾಕು ಉತ್ಪನ್ನಗಳ ಮೇಲೆ ಸಂಪೂರ್ಣ ಬ್ಯಾನ್ ಜಾರಿಗೊಳಿಸಲಾಗಿದೆ.
ಸಾರ್ವಜನಿಕ ಆರೋಗ್ಯದ ರಕ್ಷಣೆ ಮತ್ತು ಕ್ಯಾನ್ಸರ್‌ನಂತಹ ಮಾರಕ ಕಾಯಿಲೆಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರವು ತಕ್ಷಣದಿಂದ ಜಾರಿಗೆ ಬರುವಂತೆ, ಕಟ್ಟುನಿಟ್ಟಿನ ನಿರ್ಧಾರವೊಂದನ್ನು ಕೈಗೊಂಡಿದ್ದು, ರಾಜ್ಯದಲ್ಲಿ ಎಲ್ಲಾ ರೀತಿಯ ತಂಬಾಕು ಮತ್ತು ನಿಕೋಟಿನ್ ಉತ್ಪನ್ನಗಳನ್ನು ನಿಷೇಧಿಸಿ ಆದೇಶಿಸಿದೆ.
ಗುಟ್ಕಾ, ಪಾನ್ ಮಸಾಲಾ, ಜರ್ದಾ ಮತ್ತು ಖೈನಿ ಸೇರಿದಂತೆ ಎಲ್ಲಾ ರೀತಿಯ ಹೊಗೆರಹಿತ ತಂಬಾಕು ಉತ್ಪನ್ನಗಳನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಇವುಗಳ ಉತ್ಪಾದನೆ, ಪ್ಯಾಕೇಜಿಂಗ್, ಸಂಗ್ರಹಣೆ, ಸಾಗಾಣೆ ಮತ್ತು ಮಾರಾಟವು ಇನ್ನು ಮುಂದೆ ಕಾನೂನುಬಾಹಿರವಾಗಲಿದೆ.

