ಚಂಡೀಗಢ: ಸ್ಕೂಟರ್ ಹಾಗೂ ಬ್ರೆಝಾ ಕಾರಿನ ನಡುವೆ ಡಿಕ್ಕಿಯಾಗಿ ಒಲಿಂಪಿಕ್ಸ್ ಪದಕ ವಿಜೇತೆ ಮನುಭಾಕರ್ ಅವರ ಅಜ್ಜಿ ಹಾಗೂ ಚಿಕ್ಕಪ್ಪ ಸಾವನ್ನಪ್ಪಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.
ಹರಿಯಾಣದ ಮಗೇಂದ್ರಗಢ ಬೈಪಾಸ್ ರಸ್ತೆಯಲ್ಲಿ ಅಪಘಾತ ಸಂಭವಿಸಿದೆ. ಕಾರು ಮತ್ತು ಸ್ಕೂಟರ್ ಡಿಕ್ಕಿ ಹೊಡೆದ ರಭಸಕ್ಕೆ ಅವರ ಅಜ್ಜಿ ಮತ್ತು ಚಿಕ್ಕಪ್ಪ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಪಘಾತದ ಬಳಿಕ ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ.
ಎರಡು ದಿನಗಳ ಹಿಂದೆಯಷ್ಟೇ ಮನು ಭಾಕರ್ ರಾಷ್ಟ್ರಪತಿಗಳಿಂದ ಖೇಲ್ ರತ್ನ ಪ್ರಶಸ್ತಿ ಸ್ವೀಕರಿಸಿದ್ದರು. ಇನ್ನೂ ಘಟನೆ ಕುರಿತು ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಧಾವಿಸಿ, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.