ನವದೆಹಲಿ: ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಸಂಸದ ಕೆ.ಸುರೇಶ್ ಇಂದು ನಾಮಪತ್ರ ಸಲ್ಲಿಸಿದರು. ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಬಿಜೆಪಿ ಸಂಸದ ಓಂ ಬಿರ್ಲಾ ಅವರನ್ನು ಸ್ಪೀಕರ್ ಹುದ್ದೆಗೆ ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ ಕೆಲವೇ ಕ್ಷಣಗಳಲ್ಲಿ ಈ ಬೆಳವಣಿಗೆ ಸಂಭವಿಸಿದೆ.
ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಸಂಸದ ಕೆ.ಸುರೇಶ್ ಇಂದು ನಾಮಪತ್ರ ಸಲ್ಲಿಸಿದರು. ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಬಿಜೆಪಿ ಸಂಸದ ಓಂ ಬಿರ್ಲಾ ಅವರನ್ನು ಸ್ಪೀಕರ್ ಹುದ್ದೆಗೆ ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ ಕೆಲವೇ ಕ್ಷಣಗಳಲ್ಲಿ ಈ ಬೆಳವಣಿಗೆ ಸಂಭವಿಸಿದೆ.
ಹೌದು. . 72 ವರ್ಷಗಳಲ್ಲಿ ಮೊದಲ ಬಾರಿಗೆ ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಎನ್ಡಿಎ ಅಭ್ಯರ್ಥಿಯಾಗಿ ಓಂ ಬಿರ್ಲಾ ಹಾಗೂ ಇಂಡಿಯಾ ಒಕ್ಕೂಟ ಅಭ್ಯರ್ಥಿಯಾಗಿ ಕೆ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ.
ಲೋಕಸಭೆ ಸ್ಪೀಕರ್ ಹುದ್ದೆಗೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಎನ್ಡಿಎ ಮತ್ತು ಪ್ರತಿಪಕ್ಷ ಇಂಡಿಯಾ ಒಕ್ಕೂಟ ಒಮ್ಮತಕ್ಕೆ ಬಂದಿಲ್ಲ. ಹೀಗಾಗಿ ಎರಡು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಲು ಇಂದು 12 ಗಂಟೆಯವರೆಗೆ ಅವಕಾಶವಿತ್ತು. 72 ವರ್ಷಗಳ ನಂತರ ಮೂರನೇ ಬಾರಿಗೆ ಸ್ಪೀಕರ್ ಚುನಾವಣೆ ನಡೆಯುತ್ತಿದೆ. ಈ ಹಿಂದೆ 1952 ಹಾಗೂ 1974ರಲ್ಲಿಯೂ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆದಿತ್ತು.
ಇನ್ನು ಕೆ ಸುರೇಶ್ 8 ಬಾರಿ ಸಂಸದರಾಗಿದ್ದಾರೆ, ಅವರು ಈಗ ನಾಮಪತ್ರ ಸಲ್ಲಿಸಿದ್ದಾರೆ, ಪ್ರತಿಪಕ್ಷ 237 ಸಂಸದರನ್ನು ಹೊಂದಿದೆ. ಇದರಲ್ಲಿ ಮೂವರು ಸ್ವತಂತ್ರರ ಬೆಂಬಲವೂ ಇದೆ.

