Ad

ಸ್ಪೀಕರ್ ಸ್ಥಾನಕ್ಕೆ ಎನ್ ಡಿಎಯಿಂದ ಓಂ ಬಿರ್ಲಾ, ಇಂಡಿಯಾದಿಂದ ಸುರೇಶ್​ ನಾಮಪತ್ರ

Suresh

ನವದೆಹಲಿ: ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಸಂಸದ ಕೆ.ಸುರೇಶ್ ಇಂದು ನಾಮಪತ್ರ ಸಲ್ಲಿಸಿದರು. ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಬಿಜೆಪಿ ಸಂಸದ ಓಂ ಬಿರ್ಲಾ ಅವರನ್ನು ಸ್ಪೀಕರ್ ಹುದ್ದೆಗೆ ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ ಕೆಲವೇ ಕ್ಷಣಗಳಲ್ಲಿ ಈ ಬೆಳವಣಿಗೆ ಸಂಭವಿಸಿದೆ.

Ad
300x250 2

ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ವಿರೋಧ ಪಕ್ಷದ ಅಭ್ಯರ್ಥಿಯಾಗಿ ಸಂಸದ ಕೆ.ಸುರೇಶ್ ಇಂದು ನಾಮಪತ್ರ ಸಲ್ಲಿಸಿದರು. ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್ಡಿಎ) ಬಿಜೆಪಿ ಸಂಸದ ಓಂ ಬಿರ್ಲಾ ಅವರನ್ನು ಸ್ಪೀಕರ್ ಹುದ್ದೆಗೆ ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿದ ಕೆಲವೇ ಕ್ಷಣಗಳಲ್ಲಿ ಈ ಬೆಳವಣಿಗೆ ಸಂಭವಿಸಿದೆ.

ಹೌದು. . 72 ವರ್ಷಗಳಲ್ಲಿ ಮೊದಲ ಬಾರಿಗೆ ಲೋಕಸಭಾ ಸ್ಪೀಕರ್​ ಸ್ಥಾನಕ್ಕೆ ಚುನಾವಣೆ ನಡೆಯುತ್ತಿದೆ. ಎನ್​ಡಿಎ ಅಭ್ಯರ್ಥಿಯಾಗಿ ಓಂ ಬಿರ್ಲಾ ಹಾಗೂ ಇಂಡಿಯಾ ಒಕ್ಕೂಟ ಅಭ್ಯರ್ಥಿಯಾಗಿ ಕೆ ಸುರೇಶ್​ ನಾಮಪತ್ರ ಸಲ್ಲಿಸಿದ್ದಾರೆ.

ಲೋಕಸಭೆ ಸ್ಪೀಕರ್ ಹುದ್ದೆಗೆ ಸಂಬಂಧಿಸಿದಂತೆ ಬಿಜೆಪಿ ನೇತೃತ್ವದ ಎನ್​ಡಿಎ ಮತ್ತು ಪ್ರತಿಪಕ್ಷ ಇಂಡಿಯಾ ಒಕ್ಕೂಟ ಒಮ್ಮತಕ್ಕೆ ಬಂದಿಲ್ಲ. ಹೀಗಾಗಿ ಎರಡು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಲು ಇಂದು 12 ಗಂಟೆಯವರೆಗೆ ಅವಕಾಶವಿತ್ತು. 72 ವರ್ಷಗಳ ನಂತರ ಮೂರನೇ ಬಾರಿಗೆ ಸ್ಪೀಕರ್ ಚುನಾವಣೆ ನಡೆಯುತ್ತಿದೆ.  ಈ ಹಿಂದೆ 1952 ಹಾಗೂ 1974ರಲ್ಲಿಯೂ ಸ್ಪೀಕರ್ ಸ್ಥಾನಕ್ಕೆ ಚುನಾವಣೆ ನಡೆದಿತ್ತು.

ಇನ್ನು ಕೆ ಸುರೇಶ್​ 8 ಬಾರಿ ಸಂಸದರಾಗಿದ್ದಾರೆ, ಅವರು ಈಗ ನಾಮಪತ್ರ ಸಲ್ಲಿಸಿದ್ದಾರೆ, ಪ್ರತಿಪಕ್ಷ 237 ಸಂಸದರನ್ನು ಹೊಂದಿದೆ. ಇದರಲ್ಲಿ ಮೂವರು ಸ್ವತಂತ್ರರ ಬೆಂಬಲವೂ ಇದೆ.

 

Ad
Ad
Nk Channel Final 21 09 2023
Ad