ನವದೆಹಲಿ: ‘ಒಂದು ದೇಶ, ಒಂದು ಚುನಾವಣೆ’ ಯೋಜನೆಯನ್ನು ಜಾರಿಗೊಳಿಸುವ ಮೂಲಕ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರವು ದೇಶದ ಒಕ್ಕೂಟ ವ್ಯವಸ್ಥೆ ನಾಶಮಾಡಲು ಹೊರಟಿದೆ ಎಂದು ಎಐಎಂಐಎಂ ನಾಯಕ ಅಸಾದುದ್ದೀನ್ ಒವೈಸಿ ಕಿಡಿಕಾರಿದ್ದಾರೆ.
ಒಂದು ದೇಶ, ಒಂದು ಚುನಾವಣೆಗೆ ಇಂದು ಕೇಂದ್ರ ಸಚಿವ ಸಂಪುಟವು ಒಪ್ಪಿಗೆ ಸೂಚಿಸಿದ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಅವರು, ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಒಂದು ರಾಷ್ಟ್ರದ ಒಂದು ಚುನಾವಣೆಯನ್ನು ನಾನು ಸತತವಾಗಿ ವಿರೋಧಿಸಿದ್ದೇನೆ. ಏಕೆಂದರೆ ಅದು ಸಂವಿಧಾನದ ಮೂಲ ರಚನೆ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಗೆ ಧಕ್ಕೆಯುಂಟು ಮಾಡುವುದರ ಜತೆಗೆ ಒಕ್ಕೂಟ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಾಶಪಡಿಸುತ್ತದೆ.
ನಗರಸಭೆ, ಪುರಸಭೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪ್ರಚಾರ ಮಾಡುವ ಅನಿವಾರ್ಯತೆಯಿರುವ ಕಾರಣಕ್ಕೆ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಅವರಿಗೆ ಮಾತ್ರ ಏಕಕಾಲಕ್ಕೆ ಚುನಾವಣೆ ನಡೆಸಬೇಕೆಂಬ ಅನಿವಾರ್ಯತೆ ಇದೆ. ಆದರೆ, ಆಗಾಗ್ಗೆ ಚುನಾವಣೆಗಳು ನಡೆಯುವುದರಿಂದ ಪ್ರಜಾಪ್ರಭುತ್ವದ ಹೊಣೆಗಾರಿಕೆ ಹೆಚ್ಚಾಗುತ್ತದೆ’ ಎಂದು ಒವೈಸಿ ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ.
https://x.com/asadowaisi/status/1836346041907736751?