Bengaluru 23°C
Ad

ಬಿರಿಯಾನಿ ತಿಂದು ಓರ್ವ ಮಹಿಳೆ ಮೃತ್ಯು, 178 ಮಂದಿ ಅಸ್ವಸ್ಥ

ಬಿರಿಯಾನಿ ಸೇವಿಸಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 178 ಮಂದಿ ಅಸ್ವಸ್ಥಗೊಂಡಿರುವ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ನಡೆದಿದೆ.

ತಿರುವನಂತಪುರಂ: ಬಿರಿಯಾನಿ ಸೇವಿಸಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 178 ಮಂದಿ ಅಸ್ವಸ್ಥಗೊಂಡಿರುವ ಘಟನೆ ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ನಡೆದಿದೆ.

ತ್ರಿಶೂರ್ ಜಿಲ್ಲೆಯ ಪೆರಿಂಜನಂನ ರೆಸ್ಟೋರೆಂಟ್‌ನಿಂದ ಬಿರಿಯಾನಿ ತಿಂದ ಬಳಿಕ 178 ಮಂದಿ ವಾಂತಿ ಭೇದಿಯಿಂದ ಬಳಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬಿರಿಯಾನಿ ತಿಂದ ಪರಿಣಾಮ ಕುಟಿಲಕ್ಕಡವ್ ಮೂಲದ ಉಝೈಬಾ (56) ಎಂಬ ಮಹಿಳೆ ಮೃತಪಟ್ಟಿದ್ದಾರೆ.

ವಿಷಯ ತಿಳಿದ ಕೂಡಲೇ ಪೊಲೀಸರು ಹಾಗೂ ಆರೋಗ್ಯ ಮತ್ತು ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ರೆಸ್ಟೋರೆಂಟ್​ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಿರಿಯಾನಿ ತಿಂದ 178 ಮಂದಿಗೆ ಫುಡ್ ಪಾಯಿಸನ್ ಉಂಟಾಗಿದೆ ಎಂದು ವೈದ್ಯರು ಖಚಿತ ಪಡಿಸಿದ್ದಾರೆ.

ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಪಂಚಾಯತ್ ಅಧ್ಯಕ್ಷೆ ವಿನೀತಾ ಮೋಹನ್ ದಾಸ್ ಪೆರಿಂಜನಂ ಮತ್ತು ಕಯ್ಪಮಂಗಲಂ ನಿವಾಸಿಗಳು ಆಸ್ಪತ್ರೆಯಲ್ಲಿದ್ದಾರೆ. ಅಸ್ವಸ್ಥಗೊಂಡವರನ್ನು ಕೊಡಂಗಲ್ಲೂರು ಮತ್ತು ಇರಿಂಗಲಕುಡದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ಆರೋಗ್ಯ ಇಲಾಖೆ, ಪಂಚಾಯತ್, ಆಹಾರ ಮತ್ತು ಸುರಕ್ಷತಾ ಅಧಿಕಾರಿಗಳು ಮತ್ತು ಪೊಲೀಸರು ಹೋಟೆಲ್‌ನಲ್ಲಿ ತಪಾಸಣೆ ನಡೆಸಿದ್ದಾರೆ. ಆ ರೆಸ್ಟೋರೆಂಟ್‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

Ad
Ad
Nk Channel Final 21 09 2023
Ad