Ad

ಭದ್ರತಾ ಸಿಬ್ಬಂದಿಗಳ ಕಾರ್ಯಾಚರಣೆ: ಇಬ್ಬರು ಉಗ್ರರ ಹತ್ಯೆ

ಜಮ್ಮು-ಕಾಶ್ಮೀರದಲ್ಲಿ ಹಿಂದು ಯಾತ್ರಿಕರು, ನಾಗರಿಕರು ಹಾಗೂ ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸುತ್ತಿರುವುದಕ್ಕೆ ತಕ್ಕ ತಿರುಗೇಟು ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಸೂಚಿಸಿದ ಬೆನ್ನಲ್ಲೇ ಕಣಿವೆಯಲ್ಲಿ ಭದ್ರತಾ ಸಿಬ್ಬಂದಿಯು ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ.

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ ಹಿಂದು ಯಾತ್ರಿಕರು, ನಾಗರಿಕರು ಹಾಗೂ ಭದ್ರತಾ ಸಿಬ್ಬಂದಿಯನ್ನು ಗುರಿಯಾಗಿಸಿ ಉಗ್ರರು ದಾಳಿ ನಡೆಸುತ್ತಿರುವುದಕ್ಕೆ ತಕ್ಕ ತಿರುಗೇಟು ನೀಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಸೂಚಿಸಿದ ಬೆನ್ನಲ್ಲೇ ಕಣಿವೆಯಲ್ಲಿ ಭದ್ರತಾ ಸಿಬ್ಬಂದಿಯು ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ.

Ad
300x250 2

ಬಾರಾಮುಲ್ಲಾ ಜಿಲ್ಲೆಯ ಸೋಪೊರ್‌ನಲ್ಲಿ ನಡೆದ ಎನ್‌ಕೌಂಟರ್‌ ವೇಳೆ ಭದ್ರತಾ ಸಿಬ್ಬಂದಿಯು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ. ಹದಿಪೋರಾ ಪ್ರದೇಶದಲ್ಲಿ ಇಬ್ಬರು ಉಗ್ರರು ಅಡಗಿರುವ ಕುರಿತು ನಿಖರ ಮಾಹಿತಿ ಮೇರೆಗೆ ಭದ್ರತಾ ಸಿಬ್ಬಂದಿಯು ಕಾರ್ಯಾಚರಣೆ ಕೈಗೊಂಡಿದ್ದಾರೆ.

ಕಾರ್ಯಾಚರಣೆ ವೇಳೆ ಉಗ್ರರು ಕೂಡ ಗುಂಡಿನ ದಾಳಿ ನಡೆಸಿದ್ದಾರೆ. ಇದೇ ವೇಳೆ ಮುನ್ನಡೆ ಸಾಧಿಸಿದ ಯೋಧರು ಇಬ್ಬರು ಉಗ್ರರನ್ನು ಹೊಡೆದುರುಳಿಸಿದ್ದಾರೆ ಎಂಬುದಾಗಿ ಹಿರಿಯ ಪೊಲೀಸ್‌ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಉಗ್ರರು ಯಾವ ಸಂಘಟನೆಗೆ ಸೇರಿದವರು ಎಂಬ ಕುರಿತು ಇದುವರೆಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ.

Ad
Ad
Nk Channel Final 21 09 2023
Ad