ನವದೆಹಲಿ: ಬಿಜೆಪಿಯನ್ನು ಸೋಲಿಸುವುದು ಮತ್ತು ಪ್ರಸ್ತುತ ಆಡಳಿತದಲ್ಲಿರುವ ಸರ್ವಾಧಿಕಾರಿ ಮತ್ತು ಗೂಂಡಾಗಿರಿಯನ್ನು ಕೊನೆಗೊಳಿಸುವುದು ನಮ್ಮ ಗುರಿಯಾಗಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.
ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಬಿಜೆಪಿಯನ್ನು ಸೋಲಿಸಲು ಮತ್ತು ಒಬ್ಬ ಅಭ್ಯರ್ಥಿಯನ್ನು ಹಾಕಲು ಆಪ್ ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿದೆ. ಪಂಜಾಬ್‌ನಲ್ಲಿ ಎರಡು ಪಕ್ಷಗಳ ಮಧ್ಯೆ ಇರುವ ಸ್ಪರ್ಧೆಯ ಬಗ್ಗೆ ಕೇಳಿದ್ದಕ್ಕೆ, ಪಂಜಾಬ್‌ನಲ್ಲಿ ಬಿಜೆಪಿಗೆ ಯಾವುದೇ ಅಸ್ತಿತ್ವವಿಲ್ಲ ಎಂದು ಉತ್ತರಿಸಿದರು.
ದೆಹಲಿ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ರಾಜೀನಾಮೆ ನೀಡುವ ಯಾವುದೇ ಪ್ರಶ್ನೆಯಿಲ್ಲ. ನಾನು ಯಾವುದಕ್ಕೂ ಹೆದರುವುದಿಲ್ಲ. ನಾನು ಜೈಲಿಗೆ ಮರಳುವುದು ಸಮಸ್ಯೆಯಲ್ಲ. ಈ ದೇಶದ ಭವಿಷ್ಯವು ಅಪಾಯದಲ್ಲಿದೆ. ಅವರು ನನ್ನನ್ನು ಎಷ್ಟು ದಿನ ಬೇಕಾದರೂ ಜೈಲಿಗೆ ಹಾಕಲಿ, ನಾನು ಹೆದರುವುದಿಲ್ಲ ಎಂದು ತಿಳಿಸಿದರು.

