Bengaluru 23°C
Ad

ಪ್ರತಿ ಅಂಗಡಿಯ ಮೇಲೆ ಮಾಲೀಕನ ಹೆಸರು ಕಡ್ಡಾಯ: ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಆಹಾರ ಕೇಂದ್ರಗಳಲ್ಲಿ ನಿರ್ವಾಹಕರು, ಮಾಲೀಕರು ಮತ್ತು ವ್ಯವಸ್ಥಾಪಕರ ಹೆಸರು ಮತ್ತು ವಿಳಾಸವನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರ್ದೇಶನ ನೀಡಿದ್ದಾರೆ.

ಲಕ್ನೋ: ಉತ್ತರ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಆಹಾರ ಕೇಂದ್ರಗಳಲ್ಲಿ ನಿರ್ವಾಹಕರು, ಮಾಲೀಕರು ಮತ್ತು ವ್ಯವಸ್ಥಾಪಕರ ಹೆಸರು ಮತ್ತು ವಿಳಾಸವನ್ನು ಕಡ್ಡಾಯವಾಗಿ ಪ್ರದರ್ಶಿಸುವಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿರ್ದೇಶನ ನೀಡಿದ್ದಾರೆ.

ರಾಜ್ಯದಲ್ಲಿ ತಿನ್ನಬಹುದಾದ ಪದಾರ್ಥಗಳಲ್ಲಿ ಉಗುಳುವುದು ಮತ್ತು ಮೂತ್ರ ಮಿಶ್ರಣದ ವರದಿಗಳ ನಡುವೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವರದಿಯ ಪ್ರಕಾರ, ಹೋಟೆಲ್‌ಗಳು ಮತ್ತು ರೆಸ್ಟೋರೆಂಟ್‌ಗಳಲ್ಲಿ ಸಿಸಿಟಿವಿಗಳನ್ನು ಅಳವಡಿಸುವುದರ ಜೊತೆಗೆ ಬಾಣಸಿಗರು ಮತ್ತು ಕೆಲಸ ಮಾಡುವವರು ಮಾಸ್ಕ್ ಮತ್ತು ಗ್ಲೌಸ್‌ಗಳನ್ನು ಕಡ್ಡಾಯವಾಗಿ ಧರಿಸಬೇಕು ಎಂದು ಆದಿತ್ಯನಾಥ್ ಆದೇಶಿಸಿದ್ದಾರೆ.

 

Ad
Ad
Nk Channel Final 21 09 2023