ಕೊಲ್ಕತ್ತಾ: ಬಂಗಾಳದ ಆಸ್ಪತ್ರೆಯೊಂದರಲ್ಲಿ ಕರ್ತವ್ಯದಲ್ಲಿದ್ದ ನರ್ಸ್ ಗೆ ರೋಗಿಯೊಬ್ಬ ಖಾಸಗಿ ಅಂಗ ಸ್ಪರ್ಶಿಸಿ ಕಿರುಕುಳ ನೀಡಿರುವ ಘಟನೆ ಬಂಗಾಳದ ಬಿರ್ಭಮ್‌ನ ಇಲಂಬಜರ್ ಆರೋಗ್ಯ ಕೇಂದ್ರದಲ್ಲಿ ನಡೆದಿದೆ.

ವೈದ್ಯರ ಸೂಚನೆಯಂತೆ ನಾನು ಚಿಕಿತ್ಸೆ ನೀಡುತ್ತಿದ್ದೆ. ಈ ವೇಳೆ ರೋಗಿಯು ನನ್ನೊಂದಿಗೆ ಅನುಚಿತವಾಗಿ ವರ್ತಿಸತೊಡಗಿದ, ನನ್ನ ಖಾಸಗಿ ಅಂಗಗಳನ್ನು ಮುಟ್ಟಿ ಕಿರುಕುಳ ನೀಡುವ ಜೊತೆಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಎಂದು ನರ್ಸ್ ಬೇಸರ ವ್ಯಕ್ತಪಡಿಸಿದ್ದಾರೆ. ಕೃತ್ಯವೆಸಗುವ ವೇಳೆ ರೋಗಿಯ ಕುಟುಂಬಸ್ಥರು ಜೊತೆಗೆ ಇದ್ದರು ಎಂದು ಆರೋಪಿಸಿದ್ದಾರೆ.

ಭದ್ರತೆಯ ಕೊರತೆಯಿಂದಾಗಿ ಇಂತಹ ಕೃತ್ಯಗಳು ನಡೆಯುತ್ತವೆ. ಇಲ್ಲವಾದರೆ ರೋಗಿಯೊಬ್ಬನಿಗೆ ಕರ್ತವ್ಯದಲ್ಲಿರುವವರ ಜೊತೆ ಈ ರೀತಿಯಾಗಿ ನಡೆದುಕೊಳ್ಳಲು ಧೈರ್ಯವಾದರೂ ಹೇಗೆ ಬಂದಿತು ಎಂದು ಪ್ರಶ್ನಿಸಿದರು.