Bengaluru 23°C
Ad

ಜನರು ತಮ್ಮ ನಂಬಿಕೆಯನ್ನು ಮರಳಿ ಪಡೆದಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ಭಾರತ್ ಜೋಡೋ ಯಾತ್ರೆ ಹೋದಲ್ಲೆಲ್ಲಾ ಕಾಂಗ್ರೆಸ್ ಪಕ್ಷಕ್ಕೆ ಶೇಕಡಾವಾರು ಮತಗಳಲ್ಲಿ ಹೆಚ್ಚಳವನ್ನು ಕಂಡಿದ್ದೇವೆ. ಜನರು ತಮ್ಮ ನಂಬಿಕೆಯನ್ನು ಮರಳಿ ಪಡೆದಿದ್ದಾರೆ ಮತ್ತು ಅವರು ನಂಬಿಕೆ ಇಡುವಂತೆ ನಾವು ಮಾಡಬೇಕು. ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ಹೇಳಿದ್ದಾರೆ.

ನವದೆಹಲಿ: ಭಾರತ್ ಜೋಡೋ ಯಾತ್ರೆ ಹೋದಲ್ಲೆಲ್ಲಾ ಕಾಂಗ್ರೆಸ್ ಪಕ್ಷಕ್ಕೆ ಶೇಕಡಾವಾರು ಮತಗಳಲ್ಲಿ ಹೆಚ್ಚಳವನ್ನು ಕಂಡಿದ್ದೇವೆ. ಜನರು ತಮ್ಮ ನಂಬಿಕೆಯನ್ನು ಮರಳಿ ಪಡೆದಿದ್ದಾರೆ ಮತ್ತು ಅವರು ನಂಬಿಕೆ ಇಡುವಂತೆ ನಾವು ಮಾಡಬೇಕು. ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ  ಹೇಳಿದ್ದಾರೆ.

ದೆಹಲಿಯಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕಾರಿ ಸಭೆಯನ್ನು  ಉದ್ದೇಶಿಸಿ ಮಾತನಾಡಿದ ಅವರು, ಮಣಿಪುರದಲ್ಲಿ ನಾವು ಎರಡೂ ಸ್ಥಾನಗಳನ್ನು ಗೆದ್ದಿದ್ದೇವೆ. ನಾಗಾಲ್ಯಾಂಡ್, ಅಸ್ಸಾಂ ಮತ್ತು ಮೇಘಾಲಯದಲ್ಲಿಯೂ ಸ್ಥಾನಗಳನ್ನು ಗೆದ್ದಿದ್ದೇವೆ. ಮಹಾರಾಷ್ಟ್ರದಲ್ಲಿ ನಾವು ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದೇವೆ. ಎಲ್ಲಾ ವರ್ಗದ ಜನರು ಬೆಂಬಲಿಸಿದ್ದಾರೆ ಎಂದರು.

ನಾವು ಈ ಹಿಂದೆ ವಿಧಾನಸಭಾ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡಿ ಸರ್ಕಾರ ರಚಿಸಿದ್ದ ರಾಜ್ಯಗಳಲ್ಲಿ ನಮ್ಮ ಸಾಧನೆಯನ್ನು ಪುನರಾವರ್ತಿಸಲು ಸಾಧ್ಯವಾಗಲಿಲ್ಲ. ಅಂತಹ ಪ್ರತಿಯೊಂದು ರಾಜ್ಯಗಳ ಬಗ್ಗೆ ನಾವು ಶೀಘ್ರದಲ್ಲೇ ಪ್ರತ್ಯೇಕ ಚರ್ಚೆಗಳನ್ನು ನಡೆಸಬೇಕಾಗಿದೆ. ಈ ಮೂಲಕ ನಾವು ತುರ್ತು ಪರಿಹಾರ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಇದು ಸಾಂಪ್ರದಾಯಿಕವಾಗಿ ಕಾಂಗ್ರೆಸ್‌ಗೆ ಒಲವು ಹೊಂದಿರುವ ರಾಜ್ಯಗಳಾಗಿವೆ, ಅಲ್ಲಿ ನಾವು ಅವಕಾಶಗಳನ್ನು ಹೊಂದಿದ್ದೇವೆ ಎಂದು ಹೇಳಿದರು.

ದೇಶದ ಪ್ರಜಾಪ್ರಭುತ್ವ ಮತ್ತು ಸಂವಿಧಾನವನ್ನು ಉಳಿಸಲು ಕಾಂಗ್ರೆಸ್  ಪಕ್ಷವು ಎಸ್‌ಸಿ, ಎಸ್‌ಟಿ, ಒಬಿಸಿ ಮತ್ತು ಅಲ್ಪಸಂಖ್ಯಾತ ಮತದಾರರ ಪ್ರಾಬಲ್ಯವನ್ನು ನಾವು ನೋಡಿದ್ದೇವೆ. ಹೀಗಾಗಿ ನಗರ ಪ್ರದೇಶಗಳಲ್ಲೂ ನಮ್ಮ ಅಸ್ತಿತ್ವವನ್ನು ತೋರಬೇಕು ಎಂದು ಕರೆ ನೀಡಿದರು.

Ad
Ad
Nk Channel Final 21 09 2023
Ad