ನವದೆಹಲಿ: 10 ದಿನಗಳಲ್ಲಿ ಮೂರನೇ ಬಾರಿಗೆ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದೆ. ಶನಿವಾರ ಪೆಟ್ರೋಲ್ 87 ಪೈಸೆ ಮತ್ತು ಡೀಸೆಲ್ 91 ಪೈಸೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ 107.14 ರೂ. ಹಾಗೂ ಡೀಸೆಲ್ ಬೆಲೆ 95.04 ರೂ. ಆಗಿದೆ.
ಪೆಟ್ರೋಲ್ ಬೆಲೆ ಈಗ ಲೀಟರ್‌ಗೆ 99.51 ರೂ., ಡೀಸೆಲ್ ಬೆಲೆ ಲೀಟರ್‌ಗೆ 92.49 ರೂ. ಆಗಿದೆ. ಮಧ್ಯಪ್ರಾಚ್ಯ ಸಂಘರ್ಷದಿಂದಾಗಿ ಜಾಗತಿಕ ಮಟ್ಟದಲ್ಲಿ ತೈಲ ಬೆಲೆ ಏರಿಕೆಯಾಗಿದೆ. ಈ ಹಿನ್ನೆಲೆ ಮೇ 15 ರಿಂದ ಈಚೆಗೆ ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ದರವನ್ನು ಹೆಚ್ಚಿಸಿವೆ.
ಮೇ 15 ರಂದು ಬೆಲೆಗಳನ್ನು ಲೀಟರ್‌ಗೆ 3 ರೂ. ಹೆಚ್ಚಿಸಲಾಯಿತು. ನಂತರ ಮೇ 19 ರಂದು 90 ಪೈಸೆ ಹೆಚ್ಚಳವಾಯಿತು.

