ನೇಪಾಳ : ಕಠ್ಮಂಡುವಿನ ತ್ರಿಭುವನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬುಧವಾರ ಸೌರ್ಯ ಏರ್‌ಲೈನ್ಸ್ ವಿಮಾನವೊಂದು ಟೇಕಾಫ್ ಆಗುವ ವೇಳೆ ಪತನಗೊಂಡಿದೆ.ಸಿಬ್ಬಂದಿ ಸೇರಿದಂತೆ 19 ಮಂದಿ ವಿಮಾನದಲ್ಲಿ ಪೋಖರಾಗೆ ತೆರಳಿದ್ದರು. ಬೆಳಗ್ಗೆ 11 ಗಂಟೆಗೆ ಅಪಘಾತ ಸಂಭವಿಸಿದೆ ಎಂದು ಮೂಲ ತಿಳಿಸಿದೆ.
ಮೂಲಗಳ ಪ್ರಕಾರ ಈ ದುರ್ಘಟನೆಯಲ್ಲಿ 19 ಮಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗ್ತಿದ್ದು, ಆದರೆ ಈ ಬಗ್ಗೆ ಖಚಿತ ಮಾಹಿತಿ ಇನ್ನಷ್ಟೇ ತಿಳಿದು ಬರಬೇಕಿದೆ. ಅಪಘಾತ ನಡೆದ ಸ್ಥಳದಿಂದ ಇದುವರೆಗೆ ಐದು ಮೃತದೇಹಗಳನ್ನು ಹೊರತೆಗೆಯಲಾಗಿದೆ. ವಿಮಾನದ ಪೈಲಟ್ ಕ್ಯಾಪ್ಟನ್ ಮನೀಶ್ ಶಾಕ್ಯಾ (37) ಅವರನ್ನು ರಕ್ಷಿಸಿ ಆಸ್ಪತ್ರೆಗೆ ಕಳುಹಿಸಲಾಗಿದೆ.
ದಕ್ಷಿಣ ಏಷ್ಯಾ ಸಮಯದ ಪ್ರಕಾರ, ವಿಮಾನವು ಟೇಕಾಫ್ ಸಮಯದಲ್ಲಿ ರನ್‌ವೇಯಿಂದ ಸ್ಕಿಡ್ ಆಗಿ ಪತನಗೊಂಡಿದೆ. ಪತನವಾದ ತಕ್ಷಣ ವಿಮಾನವು ಬೆಂಕಿಗೆ ಆಹುತಿಯಾಯಿತು. ಅಗ್ನಿಶಾಮಕ ದಳ ಮತ್ತು ಭದ್ರತಾ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಮತ್ತು ಬದುಕುಳಿದವರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

