ಮುಂಬೈ : ಮಹಾರಾಷ್ಟ್ರದ ಬಾರಾಮತಿ ಬಳಿ ಸಂಭವಿಸಿದ ವಿಮಾನ ದುರಂತದಲ್ಲಿ ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಸೇರಿದಂತೆ 6 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಎನ್‌ಸಿಪಿ ಮುಖ್ಯಸ್ಥ ಮತ್ತು ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ಇಂದು ಬೆಳಿಗ್ಗೆ ಮುಂಬೈನಿಂದ ಬಾರಾಮತಿಗೆ ಪ್ರಯಾಣಿಸುತ್ತಿದ್ದ ಜೆಟ್ ವಿಮಾನ ಪತನಗೊಂಡಿದ್ದು, ಅದರಲ್ಲಿದ್ದ ಪೈಲಟ್‌ಗಳು ಮತ್ತು ಪವಾರ್ ಅವರ ಭದ್ರತಾ ಸಿಬ್ಬಂದಿ ಸೇರಿದಂತೆ ಇತರ ಐದು ಮಂದಿ ಸಾವನಪ್ಪಿದ್ದಾರೆ ಎಂದು ವರದಿಯಾಗಿದೆ. ಮುಂಬೈನಿಂದ ಬಾರಾಮತಿಗೆ ವಿಮಾನ ತೆರಳುತ್ತಿದ್ದು, ಏರ್‌ಕ್ರಾಫ್ಟ್ ಲ್ಯಾಂಡಿಂಗ್ ಆಗುವ ವೇಳೆ ಬಾರಾಮತಿಯ ಹೊಲದಲ್ಲಿ ಅಪಘಾತಕ್ಕೆ ಈಡಾಗಿದೆ ಎಂದು ಡಿಜಿಸಿಎ ತಿಳಿಸಿದೆ.
ಮುಂಬೈನಿಂದ ಬೆಳಿಗ್ಗೆ 8 ಗಂಟೆ ಸುಮಾರಿಗೆ ಹೊರಟ ಈ ಲಘು ವಿಮಾನ, ಒಂದು ಗಂಟೆಯ ನಂತರ ಬಾರಾಮತಿ ವಿಮಾನ ನಿಲ್ದಾಣದ ಬಳಿ ಇಳಿಯುವ ಪ್ರಯತ್ನದ ಸಮಯದಲ್ಲಿ ಅಪಘಾತಕ್ಕೀಡಾಯಿತು. ವರದಿಗಳ ಪ್ರಕಾರ, ಸ್ಥಳೀಯ ಸಂಸ್ಥೆ ಚುನಾವಣೆಗೆ ಮುಂಚಿತವಾಗಿ ಪವಾರ್ ನಾಲ್ಕು ಪ್ರಮುಖ ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಬೇಕಿತ್ತು.
ಬಾರಾಮತಿಯಲ್ಲಿ ಅಪಘಾತಕ್ಕೀಡಾದ ವಿಮಾನದ ಬಗ್ಗೆ ಮಾಹಿತಿ ನೀಡಿದ ನಾಗರಿಕ ವಿಮಾನಯಾನ ನಿರ್ದೇಶನಾಲಯ, ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅವರು ವಿಮಾನದಲ್ಲಿ ಇನ್ನೂ 2 ಸಿಬ್ಬಂದಿ (1 ಪಿಎಸ್ಒ ಮತ್ತು 1 ಅಟೆಂಡೆಂಟ್) ಮತ್ತು 2 ಸಿಬ್ಬಂದಿ (ಪಿಐಸಿ+ಎಫ್‌ಒ) ಸದಸ್ಯರೊಂದಿಗೆ ಇದ್ದರು. ಆರಂಭಿಕ ಮಾಹಿತಿಯ ಪ್ರಕಾರ, ವಿಮಾನದಲ್ಲಿದ್ದ ಯಾರೂ ಅಪಘಾತದಲ್ಲಿ ಬದುಕುಳಿದಿಲ್ಲ ಎಂದು ಹೇಳಿದೆ.

