ದೆಹಲಿ: ದೆಹಲಿಯ ಕೆಂಪುಕೋಟೆ ಮೇಲೆ ಪ್ರಧಾನಿ ಮೋದಿ ಧ್ವಜಾರೋಹಣ ನೆರವೇರಿಸಿ ಬಳಿಕ ದೇಶವನ್ನುದ್ದೇಶಿಸಿ ಭಾಷಣ ಮಾಡಿದರು. ಇಂದು ಸ್ವಾತಂತ್ರ್ಯ ಹೋರಾಟಗಾರರಿಗೆ ನಮನ ಸಲ್ಲಿಸುವ ಪರ್ವ. ರಾಷ್ಟ್ರದ ನಿರ್ಮಾಣಕ್ಕಾಗಿ ಹಲವರು ಪ್ರಾಣತ್ಯಾಗ ಮಾಡಿದ್ದಾರೆ. ದೇಶದ ಸ್ವಾತಂತ್ರ್ಯ ಸೇನಾನಿಗಳಿಗೆ ಹೃದಯಪೂರ್ವಕ ನಮನ. ಭಾರತದ ಸ್ವಾತಂತ್ರ್ಯ ಸೇನಾನಿಗಳಿಗೆ ನಾವು ಋಣಿಯಾಗಿದ್ದೇವೆ ಎಂದರು.
ಬಳಿಕ ಬಜೆಟ್ನಲ್ಲಿ ಕೃಷಿ ಕ್ಷೇತ್ರಕ್ಕೆ ಹೆಚ್ಚು ಅನುದಾನ ಮೀಸಲಿಟ್ಟಿದ್ದೇವೆ. ಸ್ತ್ರೀಯರಿಗೆ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದೇವೆ. ದೇಶದ ಮಹಿಳೆಯರು ಹಲವು ಕ್ಷೇತ್ರಗಳನ್ನು ಮುನ್ನಡೆಸುತ್ತಿದ್ದಾರೆ ಎಂದರು. ಇದೆ ವೇಳೆ ಮೋದಿಯವರು ಮೆಡಿಕಲ್ ಕಾಲೇಜು ವಿದ್ಯಾರ್ಥಿನಿ ಹತ್ಯೆ ಖಂಡಿಸಿದ್ದಾರೆ. ಮಹಿಳೆಯರ ಮೇಲಿನ ದೌರ್ಜನ್ಯ ನಡೆಸುವ ಅಪರಾಧಿಗಳಿಗೆ ಶಿಕ್ಷೆ ಆಗಲಿ. ಮಹಿಳೆ ಮೇಲಿನ ಅತ್ಯಾಚಾರ, ದೌರ್ಜನ್ಯಗಳು ರಾಕ್ಷಸಿ ಕೃತ್ಯಗಳು. ಇಂತಹ ಕೃತ್ಯಗಳನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ. ದೌರ್ಜ್ಯವೆಸಗುವ ಅಪರಾಧಿಗಳಿಗೆ ಭಯದ ವಾತಾವರಣ ನಿರ್ಮಿಸುತ್ತೇವೆ. ಮಹಿಳೆಯರು, ಬಾಲಕಿಯರ ಮೇಲಿನ ದೌರ್ಜನ್ಯ ತಡೆಗಟ್ಟಲು ಕ್ರಮ ಕೈಗೊಳ್ಳಲಾಗುತ್ತೆ ಎಂದರು.

