Ad

ಇಂದಿನಿಂದ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸ ಆರಂಭ

Russia

ನವದೆಹಲಿ: ಉಕ್ರೇನ್​, ರಷ್ಯಾ ಯುದ್ಧ ಆರಂಭವಾದ ಬಳಿಕ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ರಷ್ಯಾ ಪ್ರವಾಸ ಕೈಗೊಂಡಿದ್ದಾರೆ.

Ad
300x250 2

ಸೋಮವಾರ, ಮಂಗಳವಾರ ರಷ್ಯಾದಲ್ಲಿ ಹಲವು ಸುತ್ತಿನ ಮಾತುಕತೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬುಧವಾರ ಆಸ್ಟ್ರಿಯಾಕ್ಕೆ ತೆರಳಲಿರುವ ಪ್ರಧಾನಿ, ಗುರುವಾರದವರೆಗೂ ಅಲ್ಲಿರಲಿದ್ದಾರೆ. 46 ವರ್ಷಗಳ ಬಳಿಕ ಭಾರತದ ಪ್ರಧಾನಿಯೊಬ್ಬರು ಆಸ್ಟ್ರಿಯಾ ಪ್ರವಾಸ ಕೈಗೊಳ್ಳುತ್ತಿರುವುದು ಇದೇ ಮೊದಲು.

ಭಾರತ-ರಷ್ಯಾ ವಾರ್ಷಿಕ ಶೃಂಗಸಭೆಯು ಮೋದಿಯವರ ರಷ್ಯಾ ಭೇಟಿಯ ಪ್ರಮುಖ ಅಜೆಂಡಾವಾಗಿದೆ. ರಷ್ಯಾ-ಉಕ್ರೇನ್ ಸಂಘರ್ಷದ ನಂತರದ ಮೊದಲ ಭೇಟಿಯಲ್ಲಿ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ಈ ವಿಷಯದ ಬಗ್ಗೆ ಮಾತುಕತೆ ನಡೆಸಲಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ನರೇಂದ್ರ ಮೋದಿ ಅವರಿಗೆ ಔತಣಕೂಟ ಏರ್ಪಡಿಸಲಿದ್ದಾರೆ. ನಾಳೆ ಶೃಂಗಸಭೆ ನಡೆಯಲಿದ್ದು, ಇದರಲ್ಲಿ ಉಭಯ ನಾಯಕರು ಭಾಗವಹಿಸಲಿದ್ದಾರೆ. ಉಭಯ ದೇಶಗಳ ನಡುವಿನ ಸಂಬಂಧವನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಈ ಭೇಟಿ ಸಹಕಾರಿಯಾಗಲಿದೆ.

Ad
Ad
Nk Channel Final 21 09 2023
Ad