ಕೇರಳ: ವಯನಾಡಿನಲ್ಲಿ ಸಂಭವಿಸಿದ  ಭೂಕುಸಿತದಿಂದಾಗಿ 3 ಗ್ರಾಮಗಳು ಜನಜೀವನ ಅಸ್ತವ್ಯಸ್ತವಾಗಿದೆ. ಈ ದುರಂತದಲ್ಲಿ ನೂರಾರು ಜನ ಸಾವನಪ್ಪಿದ್ದು, ಸಾವಿರಾರು ಮನೆ ಮಟ ಕಳೆದುಕೊಂಡಿದ್ದಾರೆ. ಇದೀಗ ಸ್ಥಳಕ್ಕೆ ಪ್ರಾಧಾನಿ ಮೋದಿ ಭೇಟಿ ಅಲ್ಲಿನ ಸ್ಥಿತಿಯನ್ನು ಕಣ್ಣಾರೆ ನೋಡಿದ್ದಾರೆ.ವೈಮಾನಿಕ ಸಮೀಕ್ಷೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ವಯನಾಡಿನಲ್ಲಿ ಭೂಕುಸಿತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು. ಅಲ್ಲಿ ಅಧಿಕಾರಿಗಳಿಂದ ಪರಿಹಾರ ಮತ್ತು ರಕ್ಷಣಾ ಕಾರ್ಯಗಳ ಕುರಿತು ಮಾಹಿತಿ ಪಡೆದರು. ಈ ವೇಳೆ ಪ್ರಧಾನಿ ಮೋದಿಯವರೊಂದಿಗೆ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಮತ್ತು ಕೇಂದ್ರ ಸಚಿವ ಸುರೇಶ್ ಗೋಪಿ ಕೂಡ ಉಪಸ್ಥಿತರಿದ್ದರು.

ಭೂಕುಸಿತದ ವೈಮಾನಿಕ ಸಮೀಕ್ಷೆಯ ಸಂದರ್ಭದಲ್ಲಿ, ಭೂಕುಸಿತಕ್ಕೆ ಕಾರಣವೇನು ಎಂದು ಪ್ರಧಾನಿ ಕೇಳಿದರು ಮತ್ತು ಭೂಕುಸಿತದಿಂದ ಹೆಚ್ಚು ಹಾನಿಗೊಳಗಾದ ಪ್ರದೇಶಗಳಾದ ಪುಂಚಿರಿಮಟ್ಟಂ, ಮುಂಡಕ್ಕೈ ಮತ್ತು ಚುರಲ್ಮಲಾಗಳ ಪರಿಸ್ಥಿತಿಯನ್ನು ಸಹ ಪರಿಶೀಲಿಸಿದರು.  ವಯನಾಡ್‌ಗೆ ಭೇಟಿ ನೀಡಿದ ಪ್ರಧಾನಿ ಮೋದಿ ಅವರು ಭೂಕುಸಿತ ಸಂತ್ರಸ್ತರನ್ನು ಭೇಟಿಯಾದರು. ಪ್ರಧಾನಿಯವರು ನಿರಾಶ್ರಿತರ ಶಿಬಿರಗಳಿಗೆ ಭೇಟಿ ನೀಡಿ ಸಂತ್ರಸ್ತರನ್ನು ಭೇಟಿ ಮಾಡಿ ಅವರ ಕಷ್ಟಗಳನ್ನು ಆಲಿಸಿದರು. ಸಂತ್ರಸ್ತರಿಗೆ ಸಾಂತ್ವನ ಹೇಳಿದ ಪ್ರಧಾನಿ, ಸರ್ಕಾರ ಅವರೊಂದಿಗಿದೆ ಎಂದು ಹೇಳಿದರು