Bengaluru 23°C
Ad

ಈ ಪ್ರೀತಿಗಾಗಿ ಧನ್ಯವಾದ : ಜಯದ ಬೆನ್ನಲ್ಲೇ ಪ್ರಧಾನಿ ಮೋದಿ ಮೊದಲ ಟ್ವೀಟ್

: ಈ ಬಾರಿಯು ಕೂಡ ಮುನ್ನಡೆಯಲ್ಲಿರುವ ಬಿಜೆಪಿ ನೇತೃತ್ವದ ಎನ್​​ಡಿಎ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಧನ್ಯವಾದಗಳನ್ನು ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಸಂದೇಶವೊಂದನ್ನು ಪೋಸ್ಟ್ ಮಾಡಿದ ಮೋದಿ, ಜನರು ಸತತ ಮೂರನೇ ಬಾರಿಗೆ ಎನ್‌ಡಿಎ ಮೇಲೆ ನಂಬಿಕೆ ಇಟ್ಟಿದ್ದಾರೆ. ಇದು ಭಾರತದ ಇತಿಹಾಸದಲ್ಲಿ ಒಂದು ಐತಿಹಾಸಿಕ ಸಾಧನೆಯಾಗಿದೆ ಎಂದಿದ್ದಾರೆ.

ದೆಹಲಿ : ಈ ಬಾರಿಯು ಕೂಡ ಮುನ್ನಡೆಯಲ್ಲಿರುವ ಬಿಜೆಪಿ ನೇತೃತ್ವದ ಎನ್​​ಡಿಎ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಿಗೆ ಧನ್ಯವಾದಗಳನ್ನು ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ ನಲ್ಲಿ ಸಂದೇಶವೊಂದನ್ನು ಪೋಸ್ಟ್ ಮಾಡಿದ ಮೋದಿ, ಜನರು ಸತತ ಮೂರನೇ ಬಾರಿಗೆ ಎನ್‌ಡಿಎ ಮೇಲೆ ನಂಬಿಕೆ ಇಟ್ಟಿದ್ದಾರೆ. ಇದು ಭಾರತದ ಇತಿಹಾಸದಲ್ಲಿ ಒಂದು ಐತಿಹಾಸಿಕ ಸಾಧನೆಯಾಗಿದೆ ಎಂದಿದ್ದಾರೆ.

ಈ ಪ್ರೀತಿಗಾಗಿ ನಾನು ಜನತಾ ಜನಾರ್ದನ್ ಗೆ ನಮಸ್ಕರಿಸುತ್ತೇನೆ. ಜನರ ಆಶೋತ್ತರಗಳನ್ನು ಈಡೇರಿಸಲು ಕಳೆದ ದಶಕದಲ್ಲಿ ಮಾಡಿದ ಉತ್ತಮ ಕೆಲಸವನ್ನು ನಾವು ಮುಂದುವರಿಸುತ್ತೇವೆ ಎಂದು ಅವರಿಗೆ ಭರವಸೆ ನೀಡುತ್ತೇನೆ. ಪರಿಶ್ರಮಕ್ಕಾಗಿ ನಾನು ನಮ್ಮ ಎಲ್ಲಾ ಕಾರ್ಯಕರ್ತರಿಗೆ ಧನ್ಯನಾದಗಳನ್ನು ಅರ್ಪಿಸುತ್ತೇನೆ. ಅವರ ಅಸಾಧಾರಣ ಪ್ರಯತ್ನಗಳಿಗೆ ಪದಗಳು ಎಂದಿಗೂ ನ್ಯಾಯ ಸಲ್ಲಿಸುವುದಿಲ್ಲ ಎಂದು ಹೇಳಿದ್ದಾರೆ.

Ad
Ad
Nk Channel Final 21 09 2023
Ad