Bengaluru 20°C
Ad

ಅಂಬ್ಯುಲೆನ್ಸ್ ಗೆ ದಾರಿ ಬಿಡದೆ ಆಟ ಆಡಿದ ಚಾಲಕನಿಗೆ 2.5 ಲಕ್ಷ ದಂಡ ವಿಧಿಸಿದ ಪೊಲೀಸರು

ರೋಗಿ ಇರುವ ಅಂಬ್ಯುಲೆನ್ಸ್ ಗೆ ದಾರಿ ಕೊಡದೆ ರಸ್ತೆಯಲ್ಲಿ ಸತಾಯಿಸಿದ್ದ ಕಾರು ಚಾಲಕನಿಗೆ ಪೊಲೀಸರು ಶಾಕ್ ನೀಡಿದ್ದು, ಬರೋಬ್ಬರಿ 2.5 ಲಕ್ಷ ದಂಡ ವಿಧಿಸಿದ್ದಲ್ಲದೆ ಆತನ ಚಾಲನಾ ಪರವಾನಗಿಯನ್ನೇ ರದ್ದು ಮಾಡಿದ್ದಾರೆ. ಕೇರಳದ ತಿರುವನಂತಪುರದಲ್ಲಿ ಈ ಘಟನೆ ವರದಿಯಾಗಿದ್ದು, ಆರೋಗ್ಯಸ್ಥಿತಿ ಗಂಭೀರವಾಗಿ ರೋಗಿಯನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆ ಸಾಗಿಸುತ್ತಿದ್ದಾಗ ಮಾರ್ಗಮಧ್ಯೆ ಚಾಲಕ ಹಾರ್ನ್ ಮಾಡಿದ್ದಾರೆ.

ಕೇರಳ: ರೋಗಿ ಇರುವ ಅಂಬ್ಯುಲೆನ್ಸ್ ಗೆ ದಾರಿ ಕೊಡದೆ ರಸ್ತೆಯಲ್ಲಿ ಸತಾಯಿಸಿದ್ದ ಕಾರು ಚಾಲಕನಿಗೆ ಪೊಲೀಸರು ಶಾಕ್ ನೀಡಿದ್ದು, ಬರೋಬ್ಬರಿ 2.5 ಲಕ್ಷ ದಂಡ ವಿಧಿಸಿದ್ದಲ್ಲದೆ ಆತನ ಚಾಲನಾ ಪರವಾನಗಿಯನ್ನೇ ರದ್ದು ಮಾಡಿದ್ದಾರೆ. ಕೇರಳದ ತಿರುವನಂತಪುರದಲ್ಲಿ ಈ ಘಟನೆ ವರದಿಯಾಗಿದ್ದು, ಆರೋಗ್ಯಸ್ಥಿತಿ ಗಂಭೀರವಾಗಿ ರೋಗಿಯನ್ನು ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆ ಸಾಗಿಸುತ್ತಿದ್ದಾಗ ಮಾರ್ಗಮಧ್ಯೆ ಚಾಲಕ ಹಾರ್ನ್ ಮಾಡಿದ್ದಾರೆ.

Ad

ಈ ವೇಳೆ ಮುಂದೆ ಸಾಗುತ್ತಿದ್ದ ಕಾರು ಚಾಲಕ ಬೇಕೆಂದೇ ಆ್ಯಂಬುಲೆನ್ಸ್ ಗೆ ದಾರಿ ಮಾಡಿಕೊಡದೇ ಉದ್ಧಟನ ಪ್ರದರ್ಶನ ಮಾಡಿದ್ದಾನೆ. ಪದೇ ಪದೇ ಆ್ಯಂಬುಲೆನ್ಸ್ ಗೆ ಅಡ್ಡ ಬಂದು ರೋಗಿಯ ಜೀವವನ್ನು ಅಪಾಯಕ್ಕೆ ತಳ್ಳಿದ್ದಾನೆ.

Ad

ಇದರಿಂದ ಆಕ್ರೋಶಗೊಂಡ ಆ್ಯಂಬುಲೆನ್ಸ್ ಚಾಲಕ ಕಾರು ಮಾಲೀಕನ ದುರ್ವರ್ತನೆಯನ್ನು ತನ್ನ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದು, ಚಾಲಕ ಎಷ್ಟೇ ಹಾರ್ನ್ ಮಾಡಿದರೂ ದಾರಿ ಬಿಟ್ಟು ಕೊಡದ ಕಾರು ಮಾಲೀಕ ರಸ್ತೆಯಲ್ಲಿ ಬೇಕೆಂದೇ ಅಡ್ಡ ಬಂದಿದ್ದಾನೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಈ ವಿಚಾರ ತಿಳಿಯುತ್ತವೇ ಕೇರಳ ಟ್ರಾಫಿಕ್ ಪೊಲೀಸರು ವಿಡಿಯೋ ಮೂಲಕ ಕಾರಿನ ನಂಬರ್ ಮತ್ತು ಅದರ ಮಾಲೀಕನನ್ನು ಪತ್ತೆ ಮಾಡಿದ್ದಾರೆ.

Ad

ಅಲ್ಲದೆ ಆತನ ಮನೆಗೇ ಹೋಗಿ 2.5ಲಕ್ಷ ರೂ ದಂಡ ಹೇರಿದ್ದು, ಮಾತ್ರವಲ್ಲದೇ ಕಾರು ಚಾಲಕನ ಪರವಾನಗಿಯನ್ನೇ ರದ್ದು ಮಾಡಿದ್ದಾರೆ. ಈ ಮೂಲಕ ಆಂಬ್ಯುಲೆನ್ಸ್‌ಗೆ ದಾರಿ ಬಿಡದೆ ಆಟವಾಡಿಸುವ ಕೆಲ ಪುಂಡರಿಗೆ ಈ ಘಟನೆ ಒಂದು ಪಾಠವಾದಂತಾಗಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯರಲ್ ಆಗಿದ್ದು ನೆಟ್ಟಿಗರು ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

Ad
Ad
Ad
Nk Channel Final 21 09 2023