Bengaluru 21°C
Ad

ಪೊಲೀಸರ ಜೂಜಾಟದ ವಿಡಿಯೋ ವೈರಲ್‌ : 6 ಕಾನ್‌ಸ್ಟೆಬಲ್‌ ಅಮಾನತು

ಮಧ್ಯಪ್ರದೇಶದ ಟಿಕಮ್‌ಗಢ್ ಜಿಲ್ಲೆಯಲ್ಲಿ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬೆನ್ನಲ್ಲೇ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭೋಪಾಲ್: ಮಧ್ಯಪ್ರದೇಶದ ಟಿಕಮ್‌ಗಢ್ ಜಿಲ್ಲೆಯಲ್ಲಿ ಪೊಲೀಸರು ಜೂಜಾಟದಲ್ಲಿ ತೊಡಗಿದ್ದ ವಿಡಿಯೊವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ ಬೆನ್ನಲ್ಲೇ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಾನುವಾರ ಪೊಲೀಸರು ಜೂಜಾಟದಲ್ಲಿ ತೊಡಗಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡಿತ್ತು. ವಿವಿಧ ಪೊಲೀಸ್‌ ಠಾಣೆಗಳಲ್ಲಿ ನಿಯೋಜಿಗೊಂಡಿದ್ದ ಆರು ಕಾನ್‌ಸ್ಟೆಬಲ್‌ಗಳನ್ನು ಅಮಾನತು ಮಾಡಲಾಗಿದೆ ಎಂದು ಪೊಲೀಸ್‌ ವರಿಷ್ಠಾಧಿಕಾರಿ ರೋಹಿತ್ ಕಶ್ವಾನಿ ಹೇಳಿದ್ದಾರೆ.

ಕೋಟ್ವಾಲಿ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್‌ಗಳಾದ ಮನೋಜ್ ಅಹಿರ್ವಾರ್, ರಿತೇಶ್ ಮಿಶ್ರಾ, ಸೂರಜ್ ರಜಪೂತ್ ಮತ್ತು ಭುವನೇಶ್ವರ್ ಅಗ್ನಿಹೋತ್ರಿ ಹಾಗೂ ದೇಹತ್ ಪೊಲೀಸ್ ಠಾಣೆಯ ಅನಿಲ್ ಪಚೌರಿ, ಡಿಗೋರಾ ಪೊಲೀಸ್ ಠಾಣೆಯ ಸಲ್ಮಾನ್ ಖಾನ್ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ ಎಂದು ರೋಹಿತ್ ಮಾಹಿತಿ ನೀಡಿದ್ದಾರೆ.

ವಿಡಿಯೋವನ್ನು ಎಲ್ಲಿ ಮತ್ತು ಯಾವಾಗ ಚಿತ್ರೀಕರಿಸಲಾಯಿತು, ಈ ಘಟನೆ ವೇಳೆ ಇತರೆ ಪೊಲೀಸ್‌ ಸಿಬ್ಬಂದಿ ಸ್ಥಳದಲ್ಲಿ ಇದ್ದರೇ ಎಂಬುವುದನ್ನು ಪತ್ತೆ ಹಚ್ಚಲು ತನಿಖೆ ನಡೆಸಲಾಗುತ್ತಿದೆ. ಈ ರೀತಿಯ ಘಟನೆಗಳಿಂದ ಪೊಲೀಸ್‌ ಇಲಾಖೆಯ ಪ್ರತಿಷ್ಠೆ ಹಾಳಾಗುತ್ತಿದೆ ಎಂದು ರೋಹಿತ್ ಹೇಳಿದ್ದಾರೆ.

Ad
Ad
Nk Channel Final 21 09 2023