Ad

ಹತ್ರಾಸ್ ಕಾಲ್ತುಳಿತ : ಹೆಣಗಳ ರಾಶಿ ನೋಡಿ ಪೊಲೀಸ್‌ಗೆ ಹೃದಯಾಘಾತ

ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಫುಲ್ರೈ ಗ್ರಾಮದಲ್ಲಿ ಇಂದು ನಡೆದ ಸತ್ಸಂಗದಲ್ಲಿ ಕಾಲ್ತುಳಿತ ಉಂಟಾಗಿ 116 ಜನರು ಸಾವನ್ನಪ್ಪಿದ್ದಾರೆ.

ಹತ್ರಾಸ್: ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯ ಫುಲ್ರೈ ಗ್ರಾಮದಲ್ಲಿ ಇಂದು ನಡೆದ ಸತ್ಸಂಗದಲ್ಲಿ ಕಾಲ್ತುಳಿತ ಉಂಟಾಗಿ 116 ಜನರು ಸಾವನ್ನಪ್ಪಿದ್ದಾರೆ. ಆಸ್ಪತ್ರೆಯಲ್ಲಿ ಭದ್ರತಾ ಡ್ಯೂಟಿಗೆ ನಿಯೋಜನೆಯಾಗಿದ್ದ ರಜನೀಶ್ ಎಂಬ ಪೋಲೀಸ್ ಇಟಾಹ್ ಜಿಲ್ಲಾ ಆಸ್ಪತ್ರೆಯಲ್ಲಿ ಬಿದ್ದಿದ್ದ ಹೆಣಗಳ ರಾಶಿಯನ್ನು ನೋಡಿದ ನಂತರ ತೀವ್ರ ಹೃದಯಾಘಾತಕ್ಕೆ ಒಳಗಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Ad
300x250 2

ಇಟಾಹ್ ಮೆಡಿಕಲ್ ಕಾಲೇಜಿನಲ್ಲಿ ತುರ್ತು ಕರ್ತವ್ಯದಲ್ಲಿದ್ದ ಪೊಲೀಸ್ ರಜನೀಶ್ ಮೃತದೇಹಗಳ ರಾಶಿಯನ್ನು ನೋಡಿ ಹೃದಯಾಘಾತಕ್ಕೆ ಒಳಗಾಗಿದ್ದರು. ಅವರು ಅವಘರ್‌ನಲ್ಲಿ ಕ್ವಿಕ್ ರೆಸ್ಪಾನ್ಸ್ ಟೀಮ್ (ಕ್ಯೂಆರ್‌ಟಿ) ಭಾಗವಾಗಿದ್ದರು. ತುರ್ತು ಕರ್ತವ್ಯಕ್ಕಾಗಿ ಅವರನ್ನು ಆಸ್ಪತ್ರೆಗೆ ಕರೆಸಲಾಗಿತ್ತು. ಆದರೆ, ಅಲ್ಲಿ ಬಿದ್ದಿದ್ದ ಹೆಣಗಳು ಮತ್ತು ಗೋಳಾಡುತ್ತಿದ್ದ ಸಾವಿರಾರು ಜನರನ್ನು ನೋಡಿ ಹೃದಯಾಘಾತಕ್ಕೊಳಗಾಗಿ ಅವರು ಮೃತಪಟ್ಟಿದ್ದಾರೆ.

Ad
Ad
Nk Channel Final 21 09 2023
Ad