Bengaluru 22°C
Ad

ಮಕ್ಕಳ ಅಶ್ಲೀಲ ವಿಡಿಯೋ ನೋಡುವುದು, ಸಂಗ್ರಹಿಸುವುದು ಪೋಕ್ಸೋ ಅಡಿ ಅಪರಾಧ!

ಮಕ್ಕಳ ಅಶ್ಲೀಲ ವಿಡಿಯೋ ನೋಡುವುದು ಹಾಗೂ ಸಂಗ್ರಹಿಸುವುದು ಪೋಕ್ಸೋ ಅಡಿ ಅಪರಾದ ಎಂದು ಸೋಮವಾರ (ಸೆ.23) ಸುಪ್ರೀಂ ಕೋರ್ಟ್‌ ಆದೇಶ ನೀಡಿದೆ. 

ನವದೆಹಲಿ : ಮಕ್ಕಳ ಅಶ್ಲೀಲ ವಿಡಿಯೋ ನೋಡುವುದು ಹಾಗೂ ಸಂಗ್ರಹಿಸುವುದು ಪೋಕ್ಸೋ ಅಡಿ ಅಪರಾದ ಎಂದು ಸೋಮವಾರ (ಸೆ.23) ಸುಪ್ರೀಂ ಕೋರ್ಟ್‌ ಆದೇಶ ನೀಡಿದೆ.

ನ್ಯಾ|ಡಿ.ವೈ.ಚಂದ್ರಚೂಡ್ ಮತ್ತು ನ್ಯಾ| ಜೆ.ಪಿ. ಪರ್ದೀವಾಲಾ ಅವರಿರುವ ಪೀಠ ತೀರ್ಪು ಪ್ರಕಟಿಸಿದೆ. ಮಕ್ಕಳ ಅಶ್ಲೀಲ ವಿಡಿಯೋ ವೀಕ್ಷಣೆ ಮಾಡುವುದು ಪೋಕ್ಸೋ ಹಾಗೂ ಐಟಿ ಕಾಯ್ದೆ ಪ್ರಕಾರ ಅಪರಾಧವಲ್ಲ ಎಂದು ಜ.11ರಂದು ಮದ್ರಾಸ್‌ ಹೈಕೋರ್ಟ್‌ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ ಸಂಬಂಧ ವಿಚಾರಣೆ ನಡೆಸಿದ್ದ ಸುಪ್ರೀಂ ತೀರ್ಪು ನೀಡಿದ್ದು, ಮದ್ರಾಸ್‌ ಹೈಕೋರ್ಟ್‌ ತೀರ್ಪನ್ನು ರದ್ದು ಮಾಡಿದೆ.

ತೀರ್ಪು ನೀಡುವಲ್ಲಿ ಮದ್ರಾಸ್ ಉಚ್ಚ ನ್ಯಾಯಾಲಯವು “ಘೋರ ದೋಷ” ಎಸಗಿದೆ ಎಂದು ಸುಪ್ರೀಂ ಕೋರ್ಟ್ ಗಮನಿಸಿದೆ. ಇಂದಿನ ವಿಚಾರಣೆಯ ಸಂದರ್ಭದಲ್ಲಿ, ಸುಪ್ರೀಂ ಕೋರ್ಟ್ ಚೆನ್ನೈ ವ್ಯಕ್ತಿಯ ವಿರುದ್ಧದ ಕ್ರಿಮಿನಲ್ ಮೊಕದ್ದಮೆಗಳನ್ನು ಮತ್ತೆ ತೆರೆಯಿತು. ಮಕ್ಕಳ ಅಶ್ಲೀಲತೆಯ ಕಂಟೆಟ್ ನಿರ್ಮಿಸುವುದು ಮತ್ತು ಡೌನ್‌ಲೋಡ್ ಮಾಡುವುದು ಮಾತ್ರವಲ್ಲದೆ, ಅವುಗಳನ್ನು ಪ್ರಕಟಿಸುವುದು ಮತ್ತು ಹಂಚಿಕೊಳ್ಳುವುದು ಕೂಡಾ ಅಪರಾಧವಾಗಿದೆ ಎಂದು ಪೀಠ ಅಭಿಪ್ರಾಯಪಟ್ಟಿದೆ.

 

 

Ad
Ad
Nk Channel Final 21 09 2023