ಮುಂಬೈ: ಪೋರ್ಶೆ ಕಾರು ಡಿಕ್ಕಿ ಹೊಡೆದು ಇಬ್ಬರು ಟೆಕ್ಕಿಗಳು ಮೃತಪಟ್ಟ ಪ್ರಕರಣದಲ್ಲಿ ಅಪ್ರಾಪ್ತ ಆರೋಪಿಯ ತಾಯಿಯನ್ನು ಪುಣೆ ಪೊಲೀಸರು ಬಂಧಿಸಿದ್ದಾರೆ.
ಅಪಘಾತ ಸಂಭವಿಸಿದಾಗ ತನ್ನ ಮಗ ಕುಡಿದಿರಲಿಲ್ಲ ಎಂದು ಸಾಬೀತುಪಡಿಸಲು ಅಪ್ರಾಪ್ತನ ರಕ್ತದ ಮಾದರಿ ಬದಲಿಗೆ ಆತನ ತಾಯಿಯ ರಕ್ತದ ಮಾದರಿಯನ್ನು ಪರೀಕ್ಷೆ ವೇಳೆ ಬದಲಾಯಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಅಪರಾಧವನ್ನು ಮುಚ್ಚಿಡಲು ಪ್ರಭಾವಿ ಕುಟುಂಬ ನಡೆಸಿದ ಪ್ರಯತ್ನಗಳು ತನಿಖೆಯಿಂದ ತಿಳಿದುಬಂದಿದೆ.
ಮೇ 19 ರಂದು ಪುಣೆಯ ಕಲ್ಯಾಣಿ ನಗರದಲ್ಲಿ ಅಪ್ರಾಪ್ತ ಪಾನಮತ್ತರಾಗಿ ಪೋರ್ಶೆ ಕಾರು ಚಲಾಯಿಸಿದ ಕಾರಣ ದ್ವಿಚಕ್ರ ವಾಹನಕ್ಕೆ ಡಿಕ್ಕಿಯಾಗಿ ಇಬ್ಬರು ಟೆಕ್ಕಿಗಳು ಸಾವನ್ನಪ್ಪಿದ್ದರು. ಅಪ್ರಾಪ್ತನ ಕುಟುಂಬದ ಚಾಲಕನನ್ನು ಅಪಹರಿಸಿ ತಾನೇ ತಪ್ಪು ಒಪ್ಪಿಕೊಳ್ಳುವಂತೆ ಆಮಿಷ ಒಡ್ಡಲಾಗಿತ್ತು.

