Bengaluru 22°C
Ad

ಪೋಶೆ ಕಾರು ಅಪಘಾತ ಪ್ರಕರಣ : ಬಾಲಕನ ಅಜ್ಜನನ್ನು ಬಂಧಿಸಿದ ಪೊಲೀಸರು

ಪೋಶೆ ಕಾರು ಅಪಘಾತ ಪ್ರಕರಣದಲ್ಲಿ 17 ವರ್ಷದ ಬಾಲಕ ಕಾರು ಚಾಲನೆ ಮಾಡುತ್ತಿರಲಿಲ್ಲವೆಂದು ಬಿಂಬಿಸಲು ಪ್ರಯತ್ನಿಸಿದ್ದಕ್ಕೆ ಬಾಲಕನ ಅಜ್ಜನನ್ನು ಬಂಧಿಸಲಾಗಿದೆ ಎಂದು ಪುಣೆ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಶನಿವಾರ ಹೇಳಿದ್ದಾರೆ.

ಪುಣೆ: ಪೋಶೆ ಕಾರು ಅಪಘಾತ ಪ್ರಕರಣದಲ್ಲಿ 17 ವರ್ಷದ ಬಾಲಕ ಕಾರು ಚಾಲನೆ ಮಾಡುತ್ತಿರಲಿಲ್ಲವೆಂದು ಬಿಂಬಿಸಲು ಪ್ರಯತ್ನಿಸಿದ್ದಕ್ಕೆ ಬಾಲಕನ ಅಜ್ಜನನ್ನು ಬಂಧಿಸಲಾಗಿದೆ ಎಂದು ಪುಣೆ ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಶನಿವಾರ ಹೇಳಿದ್ದಾರೆ.

ಬಾಲಕನ ಅಜ್ಜನ ವಿರುದ್ಧ ಐಪಿಸಿ ಸೆಕ್ಷನ್ 365 ಮತ್ತು 368 ಅಡಿಯಲ್ಲಿ ಪ್ರತ್ಯೇಕ ಎಫ್ಐಆರ್ ದಾಖಲಿಸಲಾಗಿದೆ ಎಂದು ಅಮಿತೇಶ್ ಮಾಹಿತಿ ನೀಡಿದ್ದಾರೆ ಎಂದು ಸುದ್ದಿಸಂಸ್ಥೆ ‘ಎಎನ್ಐ’ ವರದಿ ಮಾಡಿದೆ. ‘ಕಾರನ್ನು ಯಾರೂ ಚಾಲನೆ ಮಾಡುತ್ತಿದ್ದರು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ. ಈ ಸಂಬಂಧ ಬಾಲಕನ ಕುಟುಂಬದ ವಯಸ್ಕ ಚಾಲಕನ ಹೇಳಿಕೆಯನ್ನು ದಾಖಲಿಸಿಕೊಂಡಿದ್ದೇವೆ. ಆತನ ಹೇಳಿಕೆ ಮಹತ್ವದ್ದಾಗಿದೆ’ ಎಂದು ಅವರು ಹೇಳಿದ್ದಾರೆ.

Ad
Ad
Nk Channel Final 21 09 2023
Ad