Ad

ರಾಷ್ಟ್ರೀಯ ಪರೀಕ್ಷಾ ಏಜೆನ್ಸಿಯ ನೂತನ ಮುಖ್ಯಸ್ಥರಾಗಿ ಪ್ರದೀಪ್ ಸಿಂಗ್ ಖರೋಲಾ ನೇಮಕ

ಎನ್​ಟಿಎ ಮುಖ್ಯಸ್ಥ ಸುಬೋಧ್ ಕುಮಾರ್ ಅವರನ್ನು ವಜಾಗೊಳಿಸಿ ಅವರ ಸ್ಥಾನಕ್ಕೆ ಹಿರಿಯ ಐಎಎಸ್ ಅಧಿಕಾರಿ ಪ್ರದೀಪ್ ಸಿಂಗ್ ಖರೋಲಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ನವದೆಹಲಿ: ದೇಶದಲ್ಲಿ ನೀಟ್, ನೆಟ್ ಪರೀಕ್ಷೆಗಳಲ್ಲಿ ಭಾರಿ ಅಕ್ರಮಗಳು ನಡೆದಿದ್ದು, ಈ ವಿಚಾರವಾಗಿ ಭಾರೀ ಪ್ರತಿಭಟನೆಗಳು ನಡೆಯುತ್ತಿವೆ. ಇಂದು ನಡೆಯಬೇಕಿದ್ದ ನೀಟ್-ಪಿಜಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಇದರ ನಡುವೆ ಎನ್​ಟಿಎ ಮುಖ್ಯಸ್ಥ ಸುಬೋಧ್ ಕುಮಾರ್ ಅವರನ್ನು ವಜಾಗೊಳಿಸಿ ಅವರ ಸ್ಥಾನಕ್ಕೆ ಹಿರಿಯ ಐಎಎಸ್ ಅಧಿಕಾರಿ ಪ್ರದೀಪ್ ಸಿಂಗ್ ಖರೋಲಾ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

Ad
300x250 2

1985ರ ಬ್ಯಾಚ್ ಭಾರತೀಯ ಆಡಳಿತ ಸೇವೆಗಳ ಅಧಿಕಾರಿ ಪ್ರದೀಪ್ ಸಿಂಗ್ ಖರೋಲಾ ಅವರನ್ನು ಹೊಸ ಎನ್​ಟಿಎ ಮಹಾನಿರ್ದೇಶಕರಾಗಿ ನೇಮಿಸಲಾಗಿದೆ. ಪರೀಕ್ಷೆಗಳ ಪಾರದರ್ಶಕ, ಸುಗಮ ಮತ್ತು ನ್ಯಾಯೋಚಿತ ನಡವಳಿಕೆಯನ್ನು ಖಚಿತಪಡಿಸಿಕೊಳ್ಳಲು ಇಸ್ರೋ ಮಾಜಿ ಅಧ್ಯಕ್ಷ ಕೆ. ರಾಧಾಕೃಷ್ಣನ್ ನೇತೃತ್ವದ ಉನ್ನತ ಮಟ್ಟದ ಸಮಿತಿಯನ್ನು ರಚಿಸುವುದಾಗಿ ಘೋಷಿಸಿದ ಕೆಲವೇ ಗಂಟೆಗಳ ನಂತರ ಸರ್ಕಾರ ಈ ನಿರ್ಧಾರವನ್ನು ತೆಗೆದುಕೊಂಡಿದೆ.

ಎನ್‌ಟಿಎ ನಡೆಸುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ಸುತ್ತಲಿನ ವಿವಾದಗಳ ಮೇಲೆ ನರೇಂದ್ರ ಮೋದಿ ಸರ್ಕಾರವು ಟೀಕೆಗೆ ಒಳಗಾಗಿದೆ. ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್‌ನಲ್ಲಿ ಅವ್ಯವಹಾರ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಆಪಾದಿತ ನೀಟ್ ಪೇಪರ್ ಸೋರಿಕೆಯನ್ನು ಬಿಹಾರ ಪೊಲೀಸರು ತನಿಖೆ ನಡೆಸುತ್ತಿದ್ದು, ಡಾರ್ಕ್‌ನೆಟ್‌ನಲ್ಲಿ ಪೇಪರ್ ಸೋರಿಕೆಯಾಗಿದೆ ಎಂದು ಕೇಂದ್ರವು ಯುಜಿಸಿ-ನೆಟ್, ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿದೆ.

ಶುಕ್ರವಾರ, ಎನ್‌ಟಿಎ ಜೂನಿಯರ್ ರಿಸರ್ಚ್ ಫೆಲೋಶಿಪ್ ಮತ್ತು ವಿಜ್ಞಾನ ಕೋರ್ಸ್‌ಗಳಲ್ಲಿ ಪಿಎಚ್‌ಡಿ ಪ್ರವೇಶಕ್ಕಾಗಿ ನಡೆಸಲಾಗುವ ಸಿಎಸ್‌ಐಆರ್ ಯುಜಿಸಿ-ನೆಟ್ ಪರೀಕ್ಷೆಯನ್ನು ಮುಂದೂಡಿತ್ತು. ಇಂದು ನಡೆಯಬೇಕಿದ್ದ ನೀಟ್-ಪಿಜಿ ಪರೀಕ್ಷೆಯನ್ನು ಕೂಡ ಮುಂದೂಡಿದೆ. ಶೀಘ್ರದಲ್ಲೇ ಹೊಸ ದಿನಾಂಕವನ್ನು ಘೊಷಿಸುವುದಾಗಿ ಆರೋಗ್ಯ ಸಚಿವಾಲಯ ತಿಳಿಸಿದೆ.

“ಕೆಲವು ಸ್ಪರ್ಧಾತ್ಮಕ ಪರೀಕ್ಷೆಗಳ ಸಮಗ್ರತೆಯ ಬಗ್ಗೆ ಇತ್ತೀಚಿನ ಆರೋಪಗಳ ಘಟನೆಗಳನ್ನು ಪರಿಗಣಿಸಿ, ಆರೋಗ್ಯ ಸಚಿವಾಲಯವು ವೈದ್ಯಕೀಯ ವಿದ್ಯಾರ್ಥಿಗಳ ರಾಷ್ಟ್ರೀಯ ಪರೀಕ್ಷಾ ಮಂಡಳಿಯು ನಡೆಸುವ NEET-PG ಪ್ರವೇಶ ಪರೀಕ್ಷೆಯ ಪ್ರಕ್ರಿಯೆಗಳ ದೃಢತೆಯ ಸಂಪೂರ್ಣ ಮೌಲ್ಯಮಾಪನವನ್ನು ಕೈಗೊಳ್ಳಲು ನಿರ್ಧರಿಸಲಾಗಿದೆ” ಎಂದು ಆರೋಗ್ಯ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.

 

Ad
Ad
Nk Channel Final 21 09 2023
Ad