ವಾರಣಾಸಿ: ದೇಶಾದ್ಯಂತ ಲೋಕಸಭಾ ಚುನಾವಣೆಯ ಮತಎಣಿಕೆ ಬಿರುಸಿನಿಂದ ನಡೆಯುತ್ತಾ ಇದ್ದು, ಯಾರು ಗೆಲ್ಲುತ್ತಾರೆ, ಯಾರು ಸೋಲುತ್ತಾರೆ ಅನ್ನುವ ಕುತೂಹಲ ಮುಗಿಲು ಮುಟ್ಟಿದೆ.
543 ಲೋಕಸಭಾ ಕ್ಷೇತ್ರದಲ್ಲಿ ಇಡೀ ದೇಶದ ಕಣ್ಣು ಬಿದ್ದಿರೋದು ವಾರಣಾಸಿ ಲೋಕಸಭಾ ಕ್ಷೇತ್ರದ ಮೇಲೆ. ಪ್ರಧಾನಿ ನರೇಂದ್ರ ಮೋದಿ ಅವರು ಸ್ಪರ್ಧಿಸಿರುವ ವಾರಣಾಸಿ ಲೋಕಸಭಾ ಕ್ಷೇತ್ರದ ಫಲಿತಾಂಶ ಭಾರೀ ಕುತೂಹಲ ಕೆರಳಿಸಿದೆ.
ಉತ್ತರಪ್ರದೇಶದಲ್ಲಿ ಸದ್ಯ ಎನ್‌ಡಿಎ, ಇಂಡಿಯಾ ಮೈತ್ರಿಕೂಟ ಅಭ್ಯರ್ಥಿಗಳ ಮಧ್ಯೆ ಜಿದ್ದಾಜಿದ್ದಿನ ಹೋರಾಟ ನಡೆಯುತ್ತಿದೆ. ಸದ್ಯದ ಮಾಹಿತಿ ಪ್ರಕಾರ ನರೇಂದ್ರ ಮೋದಿ ಅವರ ವಿರುದ್ಧ ಸ್ಪರ್ಧಿಸಿರುವ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ – 18629, ಬಿಜೆಪಿ ಅಭ್ಯರ್ಥಿ ನರೇಂದ್ರ ಮೋದಿ – 14540 ವಾರಣಾಸಿ ಲೋಕಸಭಾ ಕ್ಷೇತ್ರದ ಮತ ಎಣಿಕೆಯಲ್ಲಿ ಮೋದಿ ಅವರ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರಾಯ್ 4089 ಮತಗಳ ಅಂತರದಲ್ಲಿ ಮುನ್ನಡೆಯಲ್ಲಿದ್ದಾರೆ.

