ಬಿಹಾರ ಮುಖ್ಯಮಂತ್ರಿ ಮತ್ತು ಜನತಾ ದಳ (ಯುನೈಟೆಡ್) ಮುಖ್ಯಸ್ಥ ನಿತೀಶ್ ಕುಮಾರ್ ಅವರಿಗೆ ದೊಡ್ಡ ದೊಡ್ಡ ಮಟ್ಟದ ಅವಕಾಶಗಳು ಒಲಿದು ಬರುತ್ತಿವೆ. ಇವರು ಇಂಡಿಯಾಕ್ಕೂ ಬೇಕು ಎನ್ಡಿಎಗೂ ಬೇಕು, ಆದರೆ ನಿತೀಶ್ ಕುಮಾರ್ ಮಾತ್ರ ಎನ್ಡಿಎಗೆ ತಮ್ಮ ಹೆಚ್ಚಿನ ಮಹತ್ವ ನೀಡಿದ್ದಾರೆ.
ಈ ಹಿಂದೆ ನಿತೀಶ್ ಕುಮಾರ್ ನಮ್ಮ ಜತೆಗೆ ನಿಂತರೇ ನಾವು ಅವರಿಗೆ ಉಪಪ್ರಧಾನಿ ಸ್ಥಾನ ನೀಡುತ್ತೇವೆ ಎಂಬ ಮಾತುಗಳು ಕೇಳಿ ಬರುತ್ತಿತ್ತು. ಆದರೆ ಇದೀಗ ಜೆಡಿಯು ಪಕ್ಷದ ನಾಯಕ ಕೆಸಿ ತ್ಯಾಗಿ ಅವರು ನಿತೀಶ್ ಅವರಿಗೆ ಇಂಡಿಯಾ ಒಕ್ಕೂಟ ಪ್ರಧಾನಿ ಆಫರ್ ನೀಡಿದ್ದರು ಎಂದು ಹೇಳಿದ್ದಾರೆ. ಅಲ್ಲದೇ ಅವರು ಈ ಆಫರ್‌ನ್ನು ನಿತೀಶ್ ದಿಕ್ಕರಿಸಿದ್ದರು ಎಂದು ಈ ಬಗ್ಗೆ ಕೆಸಿ ತ್ಯಾಗಿ ಸಂದರ್ಶನ ಒಂದರಲ್ಲಿ ಹೇಳಿದ್ದಾರೆ.

