ಕೇರಳ: ಪಾಲಕ್ಕಾಡ್‌ನ ಕಲ್ಲಡಿಕೋಡ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಸಂಜೆ ಭೀಕರ ಅಪಘಾತವೊಂದು ಸಂಭವಿಸಿದೆ. ವೇಗವಾಗಿ ಬಂದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಮನೆಯೊಂದರ ಆವರಣಕ್ಕೆ ನುಗ್ಗಿದೆ.

ಬಸ್ ಮನೆಯ ಗೋಡೆಗೆ ಅಪ್ಪಳಿಸಿದ್ದು, ಮನೆಯಲ್ಲಿದ್ದವರು ಮತ್ತು ಬಸ್‌ನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯ ವೇಳೆ ಮನೆಯ ಮುಂಭಾಗದಲ್ಲಿ ಯಾರೂ ಇಲ್ಲದ ಕಾರಣ ದೊಡ್ಡ ಮಟ್ಟದ ಸಾವು-ನೋವು ತಪ್ಪಿದೆ.

ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಹೆದ್ದಾರಿಯಲ್ಲಿ ಬಸ್‌ಗಳ ಅತಿವೇಗವೇ ಈ ಅಪಘಾತಕ್ಕೆ ಕಾರಣ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.