ಗುನಾ: ಖಾಸಗಿ ವಿಮಾನಯಾನ ಅಕಾಡೆಮಿಗೆ ಸೇರಿದ ತರಬೇತಿ ವಿಮಾನವು ಮಧ್ಯಪ್ರದೇಶದ ಗುನಾ ಜಿಲ್ಲೆಯ ಏರ್ ಸ್ಟ್ರಿಪ್ ನಲ್ಲಿ ಇಂದು (ಆ.11) ಪತನಗೊಂಡಿದೆ. ಘಟನೆಯಲ್ಲಿ ಇಬ್ಬರು ಪೈಲಟ್‌ಗಳು ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಎರಡು ಆಸನಗಳ ಸೆಸ್ನಾ 152 ವಿಮಾನವು ಮಧ್ಯಾಹ್ನ 1.30 ರ ಸುಮಾರಿಗೆ ಪತನಗೊಂಡಿತು. ಘಟನೆಗೆ ಎಂಜಿನ್ ವೈಫಲ್ಯ ಕಾರಣವಾಗಿರಬಹುದು ಎಂದು ಅಂದಾಜಿಸಲಾಗಿದೆ.
ವಿಮಾನದಲ್ಲಿದ್ದ ಇಬ್ಬರು ಪೈಲಟ್ ಗಳು ಗಾಯಗೊಂಡಿದ್ದಾರೆ. ಅವರು ಅಪಾಯದಿಂದ ಪಾರಾಗಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ ಎಂದು ಗುನಾ ಪೊಲೀಸ್ ಠಾಣೆಯ ಅಧಿಕಾರಿ ದಿಲೀಪ್ ರಜೋರಿಯಾ ಹೇಳಿದ್ದಾರೆ.
ಪರೀಕ್ಷೆ ಮತ್ತು ನಿರ್ವಹಣೆಗಾಗಿ ಕೆಲ ದಿನಗಳ ಹಿಂದೆ ಈ ವಿಮಾನವನ್ನು ಇಲ್ಲಿಗೆ ತರಲಾಗಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Ad