ಶ್ರೀನಗರ: ಅಮೆರಿಕ ಮತ್ತು ಇಸ್ರೇಲ್ ನಡೆಸಿದ ಭಾರೀ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯನ್ನು ಖಂಡಿಸಿ ಜಮ್ಮು ಮತ್ತು ಕಾಶ್ಮೀರದ ಸೈದಾ ಕಡಲ್ ಪ್ರದೇಶದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಸಾವಿರಾರು ಮಂದಿ ಬೀದಿಗಿಳಿದು ಇಸ್ರೇಲ್, ಅಮೆರಿಕ, ಡೊನಾಲ್ಡ್ ಟ್ರಂಪ್ ವಿರುದ್ಧ ಆಕ್ರೋಶ ಹೊರ ಹಾಕಿ ಘೋಷಣೆಗಳನ್ನು ಕೂಗಿದ್ದಾರೆ. ಸ್ಥಳದಲ್ಲಿ ಪೊಲೀಸ್ ಮತ್ತು ಸೇನಾ ಭದ್ರತೆಯನ್ನು ಕೈಗೊಳ್ಳಲಾಗಿದೆ. ಖಮೇನಿ ಸಾವನ್ನಪ್ಪಿದ ಬಳಿಕ ಇರಾನ್ ಸೇರಿ ಅನೇಕ ಕಡೆ ಸಂಭ್ರಮಾಚರಣೆ ನಡೆಯುತ್ತಿರುವ ವೇಳೆ ಈ ಪ್ರತಿಭಟನೆ ವರದಿಯಾಗಿದೆ.

— Press Trust of India (@PTI_News) March 1, 2026