Bengaluru 22°C
Ad

ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್‌ ಹವಾ : ರಾಹುಲ್ ಗಾಂಧಿಗೆ ಭರ್ಜರಿ ಗೆಲುವು

ಮಾನನಷ್ಟ ಮೊಕದ್ದಮೆ ಪ್ರಕರಣವಾಗಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ನಾಳೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ಗೆ ಹಾಜರಾಗಲಿದ್ದಾರೆ. 

ದೆಹಲಿ : ಉತ್ತರ ಪ್ರದೇಶದಲ್ಲಿ ಸದ್ಯಕ್ಕೆ ಕಾಂಗ್ರೆಸ್‌ ಹೆಸರು ಮಾತ್ರ ಕೇಳಿಬರುತ್ತಿದೆ. ಇದೀಗ ರಾಯ್ ಬರೇಲಿಯಲ್ಲಿ ಕೂಡ ʻಕೈʼ ಮೇಲಿತ್ತಿದ್ದು, ರಾಹುಲ್ ಗಾಂಧಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ರಾಹುಲ್ ಗಾಂಧಿ ಮುಂದೆ ಸೋಲುಂಡ ಬಿಜೆಪಿಯ (BJP) ದಿನೇಶ್ ಪ್ರತಾಪ್ ಸಿಂಗ್, ಯೋಗಿ ಆದಿತ್ಯನಾಥ್ ಸಂಪುಟದಲ್ಲಿ ಸಚಿವರಾಗಿದ್ದಾರೆ.

ರಾಹುಲ್ ಗಾಂಧಿಯವರು 2004 ರಿಂದ 2019 ರವರೆಗೆ ಅಮೇಠಿ ಲೋಕಸಭಾ ಸ್ಥಾನವನ್ನು ಪ್ರತಿನಿಧಿಸಿದ್ದರು. ಕಳೆದ ಚುನಾವಣೆಯಲ್ಲಿ ಅವರು ಅಮೇಠಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿಯವರ ವಿರುದ್ಧ ಸೋತರು, ಆದರೆ ಕೇರಳದ ವಯನಾಡ್ ನಲ್ಲಿ ಗೆದ್ದು ತಮ್ಮ ಸಂಸದ ಸ್ಥಾನಮಾನವನ್ನು ಉಳಿಸಿಕೊಂಡರು.

ಈ ಬಾರಿಯೂ ಅವರು ರಾಯ್ ಬರೇಲಿ (ಉತ್ತರ ಪ್ರದೇಶ) ಮತ್ತು ವಯನಾಡ್ (ಕೇರಳ) – ಎರಡು ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಎರಡರಲ್ಲೂ ಮುನ್ನಡೆ ಸಾಧಿಸಿದ್ದಾರೆ. ವಯನಾಡಿನಲ್ಲಿ ರಾಹುಲ್ ಸಮೀಪದ ಪ್ರತಿಸ್ಪರ್ಧಿ ಸಿಪಿಎಂನ ಅನ್ನಿ ರಾಜಾ ಅವರಿಗಿಂತ 3 ಲಕ್ಷಕ್ಕೂ ಹೆಚ್ಚು ಮತಗಳಿಂದ ಮುಂದಿದ್ದಾರೆ.

 

Ad
Ad
Nk Channel Final 21 09 2023
Ad