ವಯನಾಡು:  ಕೇರಳದ ವಯನಾಡಿನಲ್ಲಿ ಭೂ ಕುಸಿತ ದುರಂತದ ಸ್ಥಳಕ್ಕೆ ಇಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷದ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭೇಟಿ ನೀಡಿದ್ದಾರೆ.  ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ಸೇತುವೆಯ ಮೇಲೆ ಸಾಗಿ ಪ್ರವಾಹದಪೀಡಿತ ಸ್ಥಳವನ್ನು ಪರಿಶೀಲಿಸಿದ ಅವರು ಸಂತ್ರಸ್ತರನ್ನು ಭೇಟಿಯಾಗಿದ್ದಾರೆ. ಕೇರಳ ಜಿಲ್ಲೆಯ ಮುಂಡಕ್ಕೈ, ಚೂರಲ್ಮಲಾ, ಅಟ್ಟಮಾಲ ಮತ್ತು ನೂಲ್ಪುಳ ಗ್ರಾಮಗಳು ಭೂಕುಸಿತದಿಂದ ಹೆಚ್ಚು ಹಾನಿಗೊಳಗಾಗಿವೆ.

ಭೂಕುಸಿತದಲ್ಲಿ 200ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಇಂದು ಮೂರನೇ ದಿನಕ್ಕೆ ಕಾಲಿಟ್ಟಿದ್ದು, ಸೇನೆಯು ಸುಮಾರು 1,000 ಜನರನ್ನು ರಕ್ಷಿಸಲಾಗಿದೆ ಮತ್ತು 220 ಜನರು ಇನ್ನೂ ನಾಪತ್ತೆಯಾಗಿದ್ದಾರೆ.