ವಯನಾಡ್‌: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹವಾಮಾನ ವೈಪರೀತ್ಯದಿಂದಾಗಿ ಭೂಕುಸಿತ ಪೀಡಿತ ವಯನಾಡು ಭೇಟಿಯನ್ನು ಮುಂದೂಡಿದ್ದಾರೆ.

ಇನ್ನು ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ರಾಹುಲ್‌, ಭೂಕುಸಿತದಿಂದ ಹಾನಿಗೊಳಗಾದ ಕುಟುಂಬಗಳನ್ನು ಭೇಟಿ ಮಾಡಲು ಮತ್ತು ಪರಿಸ್ಥಿತಿಯನ್ನು ಅವಲೋಕಿಸಲು ಪ್ರಿಯಾಂಕಾ ಮತ್ತು ನಾನು ನಾಳೆ ವಯನಾಡ್‌ಗೆ ಭೇಟಿ ನೀಡಲು ನಿರ್ಧರಿಸಿದ್ದೆವು. ಆದಾಗ್ಯೂ, ನಿರಂತರ ಮಳೆ ಮತ್ತು ಪ್ರತಿಕೂಲ ಹವಾಮಾನದ ಕಾರಣ, ನಾವು ಭೇಟಿ ನೀಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ನಮಗೆ ತಿಳಿಸಿದ್ದಾರೆ. ಆದರೂ ಶೀಘ್ರದಲ್ಲೇ ಜಿಲ್ಲೆಗೆ ಭೇಟಿ ನೀಡಿ ಅಲ್ಲಿನ ಜನರನ್ನು ಭೇಟಿಯಾಗಲಿದ್ದೇನೆ ಎಂದಿದ್ದಾರೆ.