Bengaluru 21°C
Ad

ವಿನೇಶ್ ಫೋಗಟ್, ಬಜರಂಗ್ ರಾಜೀನಾಮೆ ಅಂಗೀಕರಿಸಿದ ರೈಲ್ವೇ

ಒಲಿಂಪಿಕ್ ಕುಸ್ತಿಪಟುಗಳಾದ ವಿನೇಶ್ ಫೋಗಟ್  ಹಾಗೂ ಬಜರಂಗ್ ಪುನಿಯಾ ಅವರ ರಾಜೀನಾಮೆಯನ್ನು ಭಾರತೀಯ ರೈಲ್ವೇ ಅಂಗೀಕರಿಸಿದೆ. ಕಾಂಗ್ರೆಸ್ ಸೇರ್ಪಡೆಗೂ ಮುನ್ನ ಭಾರತೀಯ ರೈಲ್ವೆಯಲ್ಲಿನ ತಮ್ಮ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ರಾಜೀನಾಮೆ ಅಂಗೀಕಾರಗೊಂಡಿದೆ.
ನವದೆಹಲಿ: ಒಲಿಂಪಿಕ್ ಕುಸ್ತಿಪಟುಗಳಾದ ವಿನೇಶ್ ಫೋಗಟ್  ಹಾಗೂ ಬಜರಂಗ್ ಪುನಿಯಾ ಅವರ ರಾಜೀನಾಮೆಯನ್ನು ಭಾರತೀಯ ರೈಲ್ವೇ ಅಂಗೀಕರಿಸಿದೆ. ಕಾಂಗ್ರೆಸ್ ಸೇರ್ಪಡೆಗೂ ಮುನ್ನ ಭಾರತೀಯ ರೈಲ್ವೆಯಲ್ಲಿನ ತಮ್ಮ ಹುದ್ದೆಗಳಿಗೆ ರಾಜೀನಾಮೆ ಸಲ್ಲಿಸಿದ್ದರು. ಇದೀಗ ಕಾಂಗ್ರೆಸ್ ಸೇರ್ಪಡೆ ಬೆನ್ನಲ್ಲೇ ರಾಜೀನಾಮೆ ಅಂಗೀಕಾರಗೊಂಡಿದೆ.
ಪಕ್ಷ ಸೇರ್ಪಡೆಗೂ ಮುನ್ನ ವಿನೇಶ್ ಫೋಗಟ್ ಹಾಗೂ ಬಜರಂಗ್ ಪುನಿಯಾ ಭಾರತೀಯ ರೈಲ್ವೆಯಲ್ಲಿರುವ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದರು. ಭಾರತೀಯ ರೈಲ್ವೆಗೆ ಸೇವೆ ಸಲ್ಲಿಸುವುದು ನನ್ನ ಜೀವನದ ಸ್ಮರಣೀಯ ಮತ್ತು ಹೆಮ್ಮೆಯ ಸಮಯ. ನನ್ನ ಜೀವನದ ಈ ಹಂತದಲ್ಲಿ ನಾನು ರೈಲ್ವೆ ಸೇವೆಯಿಂದ ಹೊರಬರಲು ನಿರ್ಧರಿಸಿದೆ. ನನ್ನ ರಾಜೀನಾಮೆಯನ್ನು ಭಾರತೀಯ ರೈಲ್ವೆಯ ಸಮರ್ಥ ಅಧಿಕಾರಿಗಳಿಗೆ ಸಲ್ಲಿಸಿದ್ದೇನೆ. ರಾಷ್ಟ್ರದ ಸೇವೆಯಲ್ಲಿ ರೈಲ್ವೆ ನನಗೆ ನೀಡಿದ ಈ ಅವಕಾಶಕ್ಕಾಗಿ ನಾನು ಭಾರತೀಯ ರೈಲ್ವೆ ಕುಟುಂಬಕ್ಕೆ ಯಾವಾಗಲೂ ಕೃತಜ್ಞಳಾಗಿದ್ದೇನೆ ಎಂದು ಎಕ್ಸ್‌ನಲ್ಲಿ ಫೋಗಟ್ ಪೋಸ್ಟ್ ಹಾಕಿದ್ದರು
Ad
Ad
Nk Channel Final 21 09 2023