ಜೈಪುರ: ರಾಜಸ್ಥಾನದ ಬಿಜೆಪಿ ಶಾಸಕ ಅಮೃತ್‌ಲಾಲ್ ಮೀನಾ ಹೃದಯಾಘಾತದಿಂದ ಬುಧವಾರ ರಾತ್ರಿ ನಿಧನರಾದರು. ಅವರಿಗೆ 65 ವರ್ಷ ವಯಸ್ಸಾಗಿತ್ತು.
ನಿನ್ನೆ ರಾತ್ರಿ ಎದೆ ನೋವಿನಿಂದ ಬಳಲುತ್ತಿದ್ದ ಅವರನ್ನು ಉದಯಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಆಸ್ಪತ್ರೆಯಲ್ಲಿ ನಿಧನರಾದರು ಎಂದು ಬಿಜೆಪಿಯ ಮೂಲಗಳು ತಿಳಿಸಿವೆ.
ಮೀನಾ ಅವರು 2013ರಿಂದ ಮೂರು ಬಾರಿ ಶಾಸಕರಾಗಿದ್ದಾರೆ. ಸಾಲುಂಬರ್ ಬಿಜೆಪಿ ಶಾಸಕ ಅಮೃತ್ ಲಾಲ್ ಮೀನಾ ಅವರ ನಿಧನಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಭಜನ್ ಲಾಲ್ ಶರ್ಮಾ ಅವರು ಗುರುವಾರ ಸಂತಾಪ ಸೂಚಿಸಿದ್ದಾರೆ. ಅವರ ನಿಧನ ಭಾರತೀಯ ಜನತಾ ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ಸಿಎಂ ಹೇಳಿದ್ದಾರೆ. ಅವರ ಕುಟುಂಬ ಸದಸ್ಯರಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.
Ad