ಮುಂಬೈ: ನರೇಂದ್ರ ಮೋದಿ 3ನೇ ಬಾರಿ ಕೂಡ ಪ್ರಧಾನಿಯಾಗಿ ಕಾರ್ಯನಿರ್ವಹಿಸಲಿದ್ದು ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.ಇಂದು ಸಂಜೆ 7:15ಕ್ಕೆ ಪ್ರಮಾಣ ವಚನ ಸಮಾರಂಭ ನಡೆಯಲಿದ್ದು, ವಿದೇಶದ ಕೆಲವು ಅತಿಥಿಗಳ ಜೊತೆಗೆ ದೇಶದ ಹಲವು ಪ್ರಮುಖ ರಾಜಕಾರಣಿಗಳು, ಸಿನಿಮಾ ಸೆಲೆಬ್ರಿಟಿಗಳು ಹಾಗೂ ಉದ್ಯಮಿಗಳು ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.
Ad
ಮುಖ್ಯವಾಗಿ ನಟ ರಜನೀಕಾಂತ್ ಈಗಾಗಲೇ ದೆಹಲಿ ತಲುಪಿದ್ದು, ಮಾಧ್ಯಮಗಳೊಟ್ಟಿಗೆ ಮಾತನಾಡಿರುವ ರಜನೀಕಾಂತ್, ತಾವು ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಭಾಗಿ ಆಗುತ್ತಿರುವುದಾಗಿ ಹೇಳಿದ್ದಾರೆ.
Ad
ಬಾಲಿವುಡ್ ನಟ ಅನಿಲ್ ಕಪೂರ್ ಸಹ ನರೇಂದ್ರ ಮೋದಿ ಅವರ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಭಾಗಿ ಆಗಲಿದ್ದಾರೆ. ಮನೆಯಿಂದ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತೆರಳುವ ಸಂದರ್ಭದಲ್ಲಿ ಮಾಧ್ಯಮದೊಟ್ಟಿಗೆ ಮಾತನಾಡಿದ ಅನಿಲ್ ಕಪೂರ್, ‘ದೇಶದ ಪ್ರಗತಿ ಆಗಲಿದೆ, ಎಲ್ಲೆಡೆ ಧನಾತ್ಮಕ ವಾತಾವರಣ ಇದೆ. ಎಲ್ಲರಿಗೂ ಒಳ್ಳೆಯದಾಗಲಿ’ ಎಂದಿದ್ದಾರೆ.
Ad
Ad