Ad

ಮೊದಲ ಮಳೆಗೆ ಸೋರುತ್ತಿಹುದು ರಾಮ ಮಂದಿರ : ಮುಖ್ಯ ಅರ್ಚಕರ ಆತಂಕ

ಮೊದಲ ಮಳೆಗೆ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರ ಮಾಳಿಗೆ ಸೋರುತಿದೆ ಎಂದು ವರದಿಯಾಗಿದೆ. ಆರು ತಿಂಗಳ ಹಿಂದೆ 22ನೇ ಜನವರಿ 2024ರಂದು ರಾಮಮಂದಿರ ಉದ್ಘಾಟನೆ ಮಾಡಲಾಗಿತ್ತು.

ಅಯೋಧ್ಯೆ: ಮೊದಲ ಮಳೆಗೆ ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ರಾಮಮಂದಿರ ಮಾಳಿಗೆ ಸೋರುತಿದೆ ಎಂದು ವರದಿಯಾಗಿದೆ. ಆರು ತಿಂಗಳ ಹಿಂದೆ 22ನೇ ಜನವರಿ 2024ರಂದು ರಾಮಮಂದಿರ ಉದ್ಘಾಟನೆ ಮಾಡಲಾಗಿತ್ತು. ಇದೀಗ ಉತ್ತರ ಪ್ರದೇಶದ ಭಾಗದಲ್ಲಿ ಮಳೆ (Rain) ಆರಂಭವಾಗಿದ್ದು, ರಾಮಮಂದಿರದ ಮೇಲ್ಛಾವಣೆಯಿಂದ ನೀರು ಸೋರಿಕೆಯಾಗುತ್ತಿದೆ. ಗರ್ಭಗುಡಿಯಲ್ಲಿಯೂ ಸೋರಿಕೆಯಾಗಿದೆ ಎಂದು ಸುದ್ದಿಸಂಸ್ಥೆ ವರದಿ ಮಾಡಿದೆ.

Ad
300x250 2

ರಾಮಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್‌ ಅವರು ಎಎನ್‌ಐ ಸುದ್ದಿಸಂಸ್ಥೆಮುಯೊಂದಿಗೆ ಮಾತನಾಡುವಾಗ ಈ ವಿಷಯ ತಿಳಿಸಿದ್ದಾರೆ. “ಮೊದಲ ಮಳೆಗೇ ಗರ್ಭಗುಡಿಯ ಚಾವಣಿ ಮೂಲಕ ನೀರು ಒಳಗೆ ಬಂದಿದೆ. ನೂರಾರು ಎಂಜಿನಿಯರ್‌ಗಳು ಇಲ್ಲಿದ್ದಾರೆ. ಸುಸಜ್ಜಿತವಾಗಿಯೇ ರಾಮಮಂದಿರ ನಿರ್ಮಿಸಲಾಗಿದೆ. ಹೀಗಿದ್ದರೂ ಗರ್ಭಗುಡಿಯೇ ಸೋರುತ್ತಿರುವುದು ಆತಂಕ ಸೃಷ್ಟಿಸಿದೆ. ಹೀಗಾಗುತ್ತದೆ ಎಂದು ಯಾರೂ ಅಂದುಕೊಂಡಿರಲಿಲ್ಲ. ಕೂಡಲೇ ರಾಮಮಂದಿರ ಕಡೆ ಗಮನ ಹರಿಸಿ, ಸಮಸ್ಯೆಯನ್ನು ಸರಿಪಡಿಸಬೇಕಿದೆ” ಎಂದು ಅವರು ಹೇಳಿದ್ದಾರೆ.

Ad
Ad
Nk Channel Final 21 09 2023
Ad