ಮುಂಬೈ: ಭಾರತದ ಶ್ರೀಮಂತ ಉದ್ಯಮಿ ಮತ್ತು ಟಾಟಾ ಸನ್ಸ್‌ ಚೇರ್ಮನ್‌ ಆಗಿರೋ ರತನ್‌ ಟಾಟಾ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಹೀಗಾಗಿ, ಅವರನ್ನು ಮುಂಬೈನ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

86 ವರ್ಷದ ಹಿರಿಯ ಜೀವಿಗಳಾದ ರತನ್‌ ಟಾಟಾ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದಾರೆ. ಎಂದಿನಂತೆಯೇ ಜನರಲ್​ ಚೆಕಪ್​ಗಾಗಿ ಆಸ್ಪತ್ರೆಗೆ ಭೇಟಿ ನೀಡಿರುವುದಾಗಿ ತಾವೇ ತಮ್ಮ ಸೋಷಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದರು. ಆದರೀಗ, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.