ತಮಿಳುನಾಡಿನ ತಿರುಚಿ, ಕನ್ಯಾಕುಮಾರಿ, ಊಟಿ ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಜೋರಾಗಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಇಬ್ಬರು ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.

ತಮಿಳುನಾಡಿನ ದಕ್ಷಿಣ, ಪಶ್ಚಿಮ ಮತ್ತು ಡೆಲ್ಟಾ ಪ್ರದೇಶಗಳಲ್ಲಿನ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ರಾಮನಾಥಪುರಂ ಜಿಲ್ಲೆಯ ಕಮುದಿಯಲ್ಲಿ 12.44 ಸೆಂಟಿ ಮೀಟರ್ ಮಳೆಯಾಗಿದ್ದರೆ, ಮಧುರೈನ ತಲ್ಲಕುಲಂನಲ್ಲಿ 10.8 ಸೆಂಟಿ ಮೀಟರ್, ತಿರುಚ್ಚಿಯ ಪುಲ್ಲಂಬಾಡಿಯಲ್ಲಿ 9.8 ಸೆಂಟಿ ಮೀಟರ್ ಮಳೆಯಾಗಿದೆ.

ಮೇ 24ರವರೆಗೆ ಕೇರಳ ರಾಜ್ಯಾದ್ಯಂತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದು ಮತ್ತು ನಾಳೆ ಪಟ್ಟನಂತಿಟ್ಟ, ಕೊಟ್ಟಾಯಂ, ಇಡುಕ್ಕಿ ಜಿಲ್ಲೆಗಳಲ್ಲಿ 204 ಮಿಮೀ ಗಿಂತ ಹೆಚ್ಚಿನ ಮಳೆಯಾಗುವ ನಿರೀಕ್ಷೆಯಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.