Bengaluru 22°C
Ad

ರೆಮೆಲ್‌ ಚಂಡಮಾರುತ ಅಬ್ಬರ : ಕಂಗಾಲಾದ ಬಂಗಾಳ ಕೊಲ್ಲಿ

ಈ ವರ್ಷದ ಮೊದಲ ಚಂಡಮಾರುತ ‘ರೆಮೆಲ್‌’ ಭಾನುವಾರ ತಡರಾತ್ರಿ ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಿದೆ.

ಕೋಲ್ಕತಾ : ಈ ವರ್ಷದ ಮೊದಲ ಚಂಡಮಾರುತ ‘ರೆಮೆಲ್‌’ ಭಾನುವಾರ ತಡರಾತ್ರಿ ಪಶ್ಚಿಮ ಬಂಗಾಳಕ್ಕೆ ಅಪ್ಪಳಿಸಿದೆ. ಗಂಟೆಗೆ 135 ಕಿ.ಮೀ.ವರೆಗೂ ವೇಗದಲ್ಲಿ ಲಗ್ಗೆ ಇಟ್ಟ ಈ ಚಂಡಮಾರುತದಿಂದಾಗಿ ಪಶ್ಚಿಮ ಬಂಗಾಳ, ಒಡಿಶಾ, ಅಸ್ಸಾಂ, ಮೇಘಾಲಯ, ಮಣಿಪುರ, ನಾಗಾಲ್ಯಾಂಡ್‌, ಅರುಣಾಚಲಪ್ರದೇಶ ಹಾಗೂ ತ್ರಿಪುರದಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಬಾಂಗ್ಲಾದೇಶದಲ್ಲೂ ಭರ್ಜರಿ ಮಳೆ ಸುರಿಯುತ್ತಿದೆ.

Ad

ಪಶ್ಚಿಮ ಬಂಗಾಳದ ಸಾಗರ ದ್ವೀಪ ಹಾಗೂ ಬಾಂಗ್ಲಾದೇಶದ ಖೇಪುಪಾರ ನಡುವಣ ಪ್ರದೇಶದಲ್ಲಿ ಚಂಡಮಾರುತ ಅಪ್ಪಳಿಸಿದೆ. ಕೋಲ್ಕತಾ ಸೇರಿದಂತೆ ಬಂಗಾಳದಾದ್ಯಂತ ಭಾನುವಾರದಿಂದಲೇ ಮಳೆ ಸುರಿಯುತ್ತಿದೆ. ಮುನ್ನೆಚ್ಚರಿಕೆಯಾಗಿ ಹಲವಾರು ರೈಲುಗಳ ಸಂಚಾರ ಸ್ಥಗಿತಗೊಳಿಸಲಾಗಿದೆ. ಭಾನುವಾರ ಮಧ್ಯಾಹ್ನದಿಂದಲೇ 21 ತಾಸುಗಳ ಕಾಲ ಕೋಲ್ಕತಾ ವಿಮಾನ ನಿಲ್ದಾಣವನ್ನು ಬಂದ್‌ ಮಾಡಿರುವುದರಿಂದ 394 ದೇಶಿ ಹಾಗೂ ವಿದೇಶಿ ವಿಮಾನಗಳ ಸಂಚಾರ ಸ್ಥಗಿತಗೊಂಡಿದೆ.

Ad

ಕೋಲ್ಕತಾದ ಶ್ಯಾಮ ಪ್ರಸಾದ್‌ ಮುಖರ್ಜಿ ಬಂದರಿನಲ್ಲಿ ಸರಕು ಹಾಗೂ ಕಂಟೇನರ್‌ ನಿರ್ವಹಣೆ ಸೇವೆಯನ್ನು ಭಾನುವಾರ ಸಂಜೆಯಿಂದ 12 ತಾಸುಗಳ ಕಾಲ ಸ್ಥಗಿತಗೊಳಿಸಲಾಗಿದೆ.

Ad

ಸಮುದ್ರದಲ್ಲಿ ಅಲೆಗಳ ಎತ್ತರ 1 ಮೀಟರ್‌ವರೆಗೂ ತಲುಪುವ ಸಾಧ್ಯತೆ ಇದೆ. ಪಶ್ಚಿಮ ಬಂಗಾಳ ಹಾಗೂ ಬಾಂಗ್ಲಾದೇಶ ತೀರದ ತಗ್ಗುಪ್ರದೇಶಗಳಿಗೆ ನೀರು ನುಗ್ಗುವ ಸಾಧ್ಯತೆ ಇದೆ. ಮೀನುಗಾರರು ಸದ್ಯಕ್ಕೆ ಸಮುದ್ರಕ್ಕೆ ಇಳಿಯಬಾರದು ಎಂದು ಮುನ್ನೆಚ್ಚರಿಕೆ ಸಾರಲಾಗಿದೆ.

Ad

 

Ad
Ad
Nk Channel Final 21 09 2023