Ad

ಕೇದಾರನಾಥ ಚಾರಣ ಮಾರ್ಗದಲ್ಲಿ ಸಿಲುಕಿದ್ದ 8,000 ಯಾತ್ರಿಕರ ರಕ್ಷಣೆ

ಬುಧವಾರ ರಾತ್ರಿ ಭಾರೀ ಮಳೆಯಿಂದಾಗಿ ಕೇದಾರನಾಥ ಟ್ರೆಕ್ ಮಾರ್ಗದಲ್ಲಿ ಸಿಲುಕಿಕೊಂಡಿದ್ದ 8495 ಯಾತ್ರಾರ್ಥಿಗಳನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಡೆಹ್ರಾಡೂನ್ : ಬುಧವಾರ ರಾತ್ರಿ ಭಾರೀ ಮಳೆಯಿಂದಾಗಿ ಕೇದಾರನಾಥ ಟ್ರೆಕ್ ಮಾರ್ಗದಲ್ಲಿ ಸಿಲುಕಿಕೊಂಡಿದ್ದ 8495 ಯಾತ್ರಾರ್ಥಿಗಳನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿರುವ ಉತ್ತರಾಖಂಡದ ರಾಜ್ಯ ವಿಪತ್ತು ನಿರ್ವಹಣಾ ಪಡೆ  ಅಧಿಕಾರಿಗಳು, ಕೇದಾರನಾಥ ಟ್ರೆಕ್ ಮಾರ್ಗದ ವಿವಿಧ ಸ್ಥಳಗಳಲ್ಲಿ ಸಿಲುಕಿರುವ ಯಾತ್ರಾರ್ಥಿಗಳನ್ನು ರಕ್ಷಿಸುವ ಪ್ರಯತ್ನಗಳು ಶನಿವಾರ ಮಧ್ಯಾಹ್ನ 3 ಗಂಟೆಯವರೆಗೆ ಮುಂದುವರಿದಿದ್ದು, 1,101 ಜನರನ್ನು ಗೌರಿಕುಂಡ್-ಸೋನ್‌ಪ್ರಯಾಗ ಪರ್ಯಾಯ ಮಾರ್ಗ, ಕೇದಾರನಾಥ-ಚೌಮಾಸಿ ಟ್ರೆಕ್ ಮೂಲಕ ಮತ್ತು 414 ಜನರನ್ನು ಹೆಲಿಕಾಪ್ಟರ್‌ಗಳ ಮೂಲಕ ರಕ್ಷಿಸಲಾಗಿದೆ.

ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ರಕ್ಷಣಾ ಕಾರ್ಯಾಚರಣೆಯನ್ನು ನಿಗಾ ವಹಿಸುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ಪ್ರಕಟಣೆ ತಿಳಿಸಿದೆ. ಸಿಎಂ ಧಾಮಿ ಅವರ ನಿರ್ದೇಶನದ ಮೇರೆಗೆ ಗರ್ವಾಲ್ ವಿಭಾಗದ ಆಯುಕ್ತ ವಿನಯ್ ಶಂಕರ್ ಪಾಂಡೆ ಅವರನ್ನು ಕೇದಾರನಾಥ ಮಾರ್ಗದಲ್ಲಿ ಮೂಲಸೌಕರ್ಯ ಮರುಸ್ಥಾಪನೆಗೆ ನೋಡಲ್ ಅಧಿಕಾರಿಯಾಗಿ ನೇಮಿಸಲಾಗಿದೆ.

Ad
Ad
Nk Channel Final 21 09 2023