ಕಾಶ್ಮೀರ: ಇರಾನ್ ಪರಮೋಚ್ಚ ನಾಯಕ ಖಮೇನಿ ಅವರ ಹತ್ಯೆಯಿಂದ ಭಾರತದ ಹಲವು ಕಡೆ ಪ್ರತಿಭಟನೆಗಳು ನಡೆದಿದ್ದು, ಜಮ್ಮ ಮತ್ತು ಕಾಶ್ಮೀರದಲ್ಲಿ ಭುಗಿಲೆದ್ದಿದ್ದವು.
ಶಿಯಾ ಸಮುದಾಯದ ಜನರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಆದ್ದರಿಂದ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು ಮತ್ತು ಯಾವುದೇ ಅಹಿತಕರ ಘಟನೆಗಳನ್ನು ತಡೆಗಟ್ಟಲು ಮುನ್ನೆಚ್ಚರಿಕಾ ಕ್ರಮವಾಗಿ ಅಧಿಕಾರಿಗಳು ಸೋಮವಾರ ಕಾಶ್ಮೀರದ ಎಲ್ಲಾ ಜಿಲ್ಲೆಗಳಲ್ಲೂ ನಿರ್ಬಂಧ ವಿಧಿಸಿದ್ದರು.
ಎಲ್ಲಾ ಶಾಲಾ-ಕಾಲೇಜುಗಳು 2 ದಿನ ರಜೆ ಘೋಷಿಸಿವೆ. ಸೋಮವಾರ ಮತ್ತು ಮಂಗಳವಾರ ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ.

