ಇಸ್ರೇಲ್​ : ಇಸ್ರೇಲ್​ ಮೇಲೆ ಹಿಜ್ಬುಲ್ಲಾ ನಡೆಸಿದ ರಾಕೆಟ್ ದಾಳಿಯಲ್ಲಿ ಮಕ್ಕಳು ಸೇರಿ 12 ಮಂದಿ ಮೃತಪಟ್ಟಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಇಸ್ರೇಲ್ ಪ್ರಕಾರ, ಅಕ್ಟೋಬರ್ 7 ರಂದು ಹೋರಾಟ ಪ್ರಾರಂಭವಾದ ನಂತರ ಹಿಜ್ಬುಲ್ಲಾ ನಡೆಸಿದ ಅತಿದೊಡ್ಡ ದಾಳಿ ಇದಾಗಿದೆ.

ಕೆಲವು ಇಸ್ರೇಲಿ ನಾಯಕರು ಪ್ರತೀಕಾರಕ್ಕೆ ಕರೆ ನೀಡಿದ್ದಾರೆ. ಆದರೆ, ರಾಕೆಟ್ ಹಾರಿಸಿರುವುದನ್ನು ಹಿಜ್ಬುಲ್ಲಾ ನಿರಾಕರಿಸಿದೆ. ಕಳೆದ 10 ತಿಂಗಳಿಂದ ಇಸ್ರೇಲ್ ಸೇನೆ ಮತ್ತು ಹಿಜ್ಬುಲ್ಲಾ ಪರಸ್ಪರ ಗುಂಡಿನ ದಾಳಿ ನಡೆಸುತ್ತಿದೆ. ಈ ದಾಳಿಗೂ ಮುನ್ನವೇ ಇಬ್ಬರ ನಡುವಿನ ಘರ್ಷಣೆ ಕಾದಾಟದ ಹಂತ ತಲುಪಿದೆ ಎನ್ನಲಾಗುತ್ತಿದೆ. ದಾಳಿಯಲ್ಲಿ 12 ಮಂದಿ ಸಾವನ್ನಪ್ಪಿದ್ದು, 29 ಮಂದಿ ಗಾಯಗೊಂಡಿದ್ದಾರೆ.