Bengaluru 22°C
Ad

ಡಿ.ರೂಪಾ Vs ರೋಹಿಣಿ ಸಿಂಧೂರಿ ಜಟಾಪಟಿ; ಸುಪ್ರೀಂ ನಿಂದ ಬಿಗ್​ ಶಾಕ್ !

Defamation

ನವದೆಹಲಿ: ಒಂದು ವರ್ಷದ ಹಿಂದೆ ರಾಜ್ಯದಲ್ಲಿ ಐಪಿಎಸ್ ಆಫೀಸರ್​ ವರ್ಸಸ್ ಐಎಎಸ್ ಆಫೀಸರ್​ ಯುದ್ಧ ಜೋರಾಗಿ ನಡೆದಿತ್ತು. ರೋಹಿಣಿ ಸಿಂಧೂರಿಯವರ ಆಕ್ಷೇಪಾರ್ಹ ಫೋಟೋಗಳನ್ನು ಸೊಷಿಯಲ್ ಮಿಡಿಯಾದಲ್ಲಿ ಪೋಸ್ಟ್ ಮಾಡುವ ಮೂಲಕ ಐಪಿಎಸ್ ಅಧಿಕಾರಿ ಡಿ.ರೂಪಾ ದೊಡ್ಡ ಕಿಚ್ಚನ್ನು ಹೊತ್ತಿಸಿದ್ದರು.

ಇಬ್ಬರ ಜಗಳ ವಿಧಾನಸೌಧದ ಮೆಟ್ಟಿಲ್ಲನ್ನೂ ಕೂಡ ಏರಿತ್ತು. ಕೊನೆಗೆ ನ್ಯಾಯಾಲಯದಲ್ಲಿ ಡಿ ರೂಪಾ ವಿರುದ್ಧ ಕ್ರಿಮಿನಲ್ ಮಾನನಷ್ಟ ಕೇಸ್ ದಾಖಲಿಸುವ ಮಟ್ಟಕ್ಕೂ ಹೋಯ್ತು. ರೋಹಿಣಿ ತಮ್ಮ ವಿರುದ್ಧ ಹಾಕಿದ್ದ ಮಾನನಷ್ಟ ಮೊಕದ್ದಮೆಯನ್ನು ರದ್ದು ಮಾಡಬೇಕು ಎಂದು ಹೈಕೋರ್ಟ್ ಮೊರೆ ಹೋಗಿದ್ದ ಡಿ ರೂಪಾ ಅವರಿಗೆ ನಿರಾಸೆ ಕಾದಿತ್ತು. ಕೇಸ್​ ರದ್ದಿಗೆ ಹೈಕೋರ್ಟ್​ ನಿರಾಕರಿಸಿತ್ತು. ಸದ್ಯ ಡಿ. ರೂಪಾ ಅವರಿಗೆ ಸುಪ್ರೀಂಕೋರ್ಟ್​​ನಲ್ಲೂ ಕೂಡ ಹಿನ್ನಡೆಯುಂಟಾಗಿದೆ. ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಿಸಲು ನಿರಾಕರಿಸಿದೆ.

ಪ್ರಕರಣದ ವಿಚಾರಣೆಯನ್ನು ನಡೆಸಿದ ಸುಪ್ರೀಂಕೋರ್ಟ್,​ ಕೇಸ್ ರದ್ದು ಪಡಿಸಲು ನಿರಾಕರಿಸಿದ್ದ ಹೈಕೋರ್ಟ್ ಆದೇಶದಲ್ಲಿ ನಾವೇಕೆ ಮಧ್ಯಪ್ರವೇಶಿಸಬೇಕು? ನಾವು ಪ್ರಕರಣ ಸೆಟ್ಲ್​ಮೆಂಟ್ ಆಗಲಿ ಎಂದು ಬಯಸಿದ್ದೇವು. ಈಗ ಇಬ್ಬರೂ ಬಹಳ ಸಮಯ ತೆಗೆದುಕೊಂಡಿದ್ದಾರೆ ಎಂದಿರುವ ಸರ್ವೋಚ್ಛ ನ್ಯಾಯಾಲಯ. ರೂಪಾ ವಿರುದ್ಧದ ಕ್ರಿಮಿನಲ್ ಮಾನನಷ್ಟ ಮೂಕದ್ದಮೆಗೆ ನೀಡಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಮುಂದುವರಿಸಿದೆ.

 

 

Ad
Ad
Nk Channel Final 21 09 2023